ಧಾರವಾಡ: ರಸ್ತೆಯಲ್ಲಿ ಹೋಗುತ್ತಿದ್ದ ಲಾರಿಗೆ ಎಮ್ಮೆಯೊಂದು ಅಡ್ಡ ಬಂದ ಪರಿಣಾಮ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಉರುಳಿ ಬಿದ್ದ ಘಟನೆ ಮನಗುಂಡಿ ಕ್ರಾಸ್ ಬಳಿಯಲ್ಲಿ ಇಂದು ಸಾಯಂಕಾಲ ಸಂಭವಿಸಿದೆ.
ಜೋರಾಗಿ ಹೋಗುತ್ತಿದ್ದ ಲಾರಿಗೆ ಒಮ್ಮೆಲೇ ಎಮ್ಮೆಯೊಂದು ರಸ್ತೆಯಲ್ಲಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಉರುಳಿ ಬಿದ್ದಿದೆ,ಬಿದ್ದ ಲಾರಿಯನ್ನು ಕ್ರೇನ್ ಮೂಲಕ ಎತ್ತಲು ಪೊಲೀಸರು ಕೂಡಾ ಹರಸಾಹಸ ಪಟ್ಟ ಘಟನೆ ಕೂಡಾ ನಡೆದಿದ್ದು,ಸ್ವಲ್ಪ ಹೊತ್ತು ಸ್ಥಳದಲ್ಲಿ ಟ್ರಾಫಿಕ್ ಜಾಮ್ ಕೂಡಾ ಆಗಿತ್ತು.
ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಸಣ್ಣಪುಟ್ಟ ಗಾಯವಾಗಿದ್ದು,ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
28/08/2022 11:57 am