ಧಾರವಾಡ: ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿಯ ಯಾದವಾಡ ರಸ್ತೆಯಲ್ಲಿ ಸಂಭವಿಸಿದೆ.
ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದ ಮಹೇಶ ನಾನಣ್ಣವರ ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ. ಹೂಲಿ ಗ್ರಾಮದ ಮಾರುತಿ ಮಳಗಲಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಧಾರವಾಡದಿಂದ ಬರುತ್ತಿದ್ದ ಒಂದು ಬೈಕ್‌ಗೆ ಎದುರಿಗೆ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಇದರಿಂದ ಮಹೇಶ ನಾನಣ್ಣವರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಂದು ಬೈಕ್‌ನಲ್ಲಿದ್ದ ಮಾರುತಿ ಗಂಭೀರವಾಗಿ ಗಾಯಗೊಂಡಿದ್ದು, ಇದರ ಜೊತೆಗೆ ಮಾರುತಿ ಅವರ ಬೈಕ್‌ನಲ್ಲಿದ್ದ ಇಬ್ಬರು ಮಹಿಳೆಯರೂ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.
Kshetra Samachara
28/08/2022 10:07 pm