ಧಾರವಾಡ: ಟ್ರ್ಯಾಕ್ಟರ್ ಪಲ್ಟಿಯಾಗಿ ರೈತನೋರ್ವ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಕರಡಿಗುಡ್ಡ ಹಾಗೂ ಯಾದವಾಡ ರಸ್ತೆ ಮಧ್ಯೆ ನಿನ್ನೆ ರಾತ್ರಿ ಸಂಭವಿಸಿದೆ.ಕರಡಿಗುಡ್ಡ ಗ್ರಾಮದ ಮಡಿವಾಳಪ್ಪ ಕರೆಣ್ಣವರ ಎಂಬುವವರೇ ಈ ಘಟನೆಯಲ್ಲಿ ಸಾವನ್ನಪ್ಪಿದ ರೈತ.
ಹೊಲದ ಕೆಲಸ ಮುಗಿಸಿ ಮರಳಿ ಬರುತ್ತಿದ್ದ ವೇಳೆ ಟ್ರ್ಯಾಕ್ಟರ್ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ ಇದರಿಂದ ತೀವ್ರವಾಗಿ ಗಾಯಗೊಂಡ ಮಡಿವಾಳಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.
Kshetra Samachara
29/08/2022 08:01 am