ಹುಬ್ಬಳ್ಳಿ : ಕುಡಿದ ಮತ್ತಿನಲ್ಲಿ ಬೈಕ್ ಚಾಲನೆ ಮಾಡುತ್ತಿದ್ದ ಸವಾರನೊಬ್ಬ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಹುಬ್ಬಳ್ಳಿ ಹೊರವಲಯದ ಬಳಿಯಲ್ಲಿ ನಡೆದಿದೆ.
ನಗರದ ಆಕ್ಸ್ಫರ್ಡ್ ಕಾಲೇಜು ಬಳಿಯಲ್ಲಿ ಕುಡಿದು ಬೈಕ್ ಚಾಲನೆ ಮಾಡುತ್ತಿದ್ದ ಯುವಕನೊಬ್ಬ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ್ದಿದ್ದಾನೆ, ಆಗ ಬೈಕ್ ಹಿಂದೆ ಬರುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್'ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಬಿದ್ದು ಗಾಯಗೊಂಡಿದ್ದಾನೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ಸ್ಥಳಕ್ಕೆ ಪೂರ್ವ ಸಂಚಾರಿ ಠಾಣೆಯ ಪೊಲೀಸರು ಭೇಟಿಯನ್ನು ನೀಡಿ ಅಪಘಾತವಾದ ಬೈಕ್ ಕಾರು ಹಾಗೂ ಬಸ್ ಪೂರ್ವ ಸಂಚಾರಿ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ವಿನಯ ರೆಡ್ಡಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
Kshetra Samachara
03/09/2022 07:04 pm