ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವರೂರು ಬಳಿ ಭೀಕರ ರಸ್ತೆ ಅಪಘಾತ ಇಬ್ಬರ ದುರ್ಮರಣ; ಓರ್ವನ ಸ್ಥಿತಿ ಗಂಭೀರ

ಹುಬ್ಬಳ್ಳಿ: ಪುಣೆ -ಬೆಂಗಳೂರು ರಸ್ತೆಯ ವರೂರು ಸಮೀಪದ ಗಣೇಶ ಹೋಟೆಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡು, ಓರ್ವ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಮಧ್ಯರಾತ್ರಿ ಒಂದು ಗಂಟೆಗೆ ನಡೆದಿದೆ.

ದಾವಣಗೆರೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕಾರಿನಲ್ಲಿ ನಾಲ್ಕು ಜನ ಪ್ರಯಾಣವನ್ನು ಮಾಡುತ್ತಿದ್ದರು. ವರೂರು ಬಳಿಯ ಗಣೇಶ ಹೋಟೆಲ್ ಬಳಿ ಅತಿವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವನ್ನಪ್ಪಿದರೆ, ಓರ್ವ ಮಹಿಳೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಇನ್ನೊಬ್ಬ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು ಆತನ ಸ್ಥಿತಿ ಕೂಡ ಗಂಭೀರವಾಗಿದೆ.

ಕಾರಿನಲ್ಲಿದ್ದ ನಾಲ್ವರ ಪೈಕಿ ಮೂರು ಜನ ದಾವಣಗೆರೆ ಮೂಲದ ಶಾರುಖ್, ಸೋಹೆಲ್, ಪಾರುಕ್ ಎಂದು ತಿಳಿದು ಬಂದಿದ್ದು, ಮೃತಪಟ್ಟ ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ ಪೆಕ್ಟರ್ ರಮೇಶ್ ಗೋಕಾಕ ಭೇಟಿ ನೀಡಿ, ಮೃತದೇಹವನ್ನು ಕಿಮ್ಸ್ ಶವಾಗಾರಕ್ಕೆ ರವಾನಿಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

-ವಿನಯ ರೆಡ್ಡಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

14/09/2022 07:47 am

Cinque Terre

119.98 K

Cinque Terre

1

ಸಂಬಂಧಿತ ಸುದ್ದಿ