ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ತಪ್ಪಿತು ಮತ್ತೊಂದು ದುರಂತ: ದಿಢೀರನೆ ಕುಸಿದು ಬಿದ್ದ ಮನೆ

ಧಾರವಾಡ: ಮಳೆಯಿಂದಾಗಿ ಮೊನ್ನೆಯಷ್ಟೇ ಧಾರವಾಡ ತಾಲೂಕಿನ ತಡಕೋಡ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಬಿದ್ದು ಐವರು ಪ್ರಾಣಾಪಾಯದಿಂದ ಪಾರಾಗಿದ್ದ ಘಟನೆ ಮಾಸುವ ಮುನ್ನವೇ ಈಗ ಅದೇ ರೀತಿ ಘಟನೆ ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮದಲ್ಲೂ ನಡೆದಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮದ ಸುರೇಶ ತಿಪ್ಪಣ್ಣವರ ಎಂಬುವವರಿಗೆ ಸೇರಿದ ಮನೆಯ ಮೇಲ್ಛಾವಣಿ ದಿಢೀರನೇ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯವರು ಹೊರಗಡೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ, ಹಸು, ಎಮ್ಮೆಗಳು ಮಣ್ಣಿನಡಿ ಸಿಲುಕಿಕೊಂಡಿದ್ದವು. ಸ್ಥಳೀಯರು ಅವುಗಳ ರಕ್ಷಣಾ ಕಾರ್ಯ ನಡೆಸಿದರು.

ಇಂದು ಬೆಳಗಿನಜಾವ ಈ ಘಟನೆ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಆಗಬಹದಾಗಿದ್ದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ ಕುಟುಂಬ ನಿಟ್ಟುಸಿರು ಬಿಟ್ಟಿದೆ.

Edited By : Shivu K
Kshetra Samachara

Kshetra Samachara

16/09/2022 11:23 am

Cinque Terre

77.49 K

Cinque Terre

2

ಸಂಬಂಧಿತ ಸುದ್ದಿ