ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಚಿಗರಿ ಬಸ್ಸಿನಲ್ಲಿ ಬೆಂಕಿ; ಪ್ರಯಾಣಿಕರು ಸುರಕ್ಷಿತ

ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರದ ಮಧ್ಯೆ ಸಂಚರಿಸುವ ಬಿಆರ್‌ಟಿಎಸ್ ಸಂಸ್ಥೆಯ ಚಿಗರಿ ಬಸ್ಸಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಠಿಸಿದ ಘಟನೆ ಧಾರವಾಡದ ಕೋರ್ಟ್ ಸರ್ಕಲ್ ಬಳಿ ನಡೆದಿದೆ.

ಪ್ರಯಾಣಿಕರನ್ನು ಕರೆದುಕೊಂಡು ಹುಬ್ಬಳ್ಳಿ ಕಡೆಗೆ ಹೊರಟಿದ್ದ ಚಿಗರಿ ಬಸ್ಸಿನ ಹಿಂಬದಿಯ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಕಂಡ ಚಾಲಕ, ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ.

ಕೂಡಲೇ ಅಗ್ನಿಶಾಮಕ ದಳದವರಿಗೆ ಸುದ್ದಿ ಮುಟ್ಟಿದ್ದರಿಂದ ಸ್ಥಳಕ್ಕೆ ಬಂದ ಸಿಬ್ಬಂದಿ ಬಸ್ಸಿನಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸುವ ಕೆಲಸ ಮಾಡಿದ್ದಾರೆ.

Edited By : Manjunath H D
Kshetra Samachara

Kshetra Samachara

16/09/2022 06:00 pm

Cinque Terre

53.06 K

Cinque Terre

12

ಸಂಬಂಧಿತ ಸುದ್ದಿ