ಕುಂದಗೋಳ : ಹುಬ್ಬಳ್ಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ಮದ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸಕಾಲಕ್ಕೆ ಆಂಬ್ಯುಲೆನ್ಸ್ ಸೇವೆ ಸಿಗದೆ ಅಸುನೀಗಿದ್ದಾನೆ.
ಹೌದು ! ಲಕ್ಷ್ಮೇಶ್ವರದಿಂದ ಉಸುಕು ತುಂಬಿಕೊಂಡು ವೇಗವಾಗಿ ಬರುತ್ತಿದ್ದ ಲಾರಿ ಎದುರಿಗಿದ್ದ ಸಾರಿಗೆ ಬಸ್ ಓವರಟೆಕ್ ಮಾಡುವ ಭರದಲ್ಲಿ ರಸ್ತೆ ಪಕ್ಕ ನಿಂತಿದ್ದ ಬೈಕ್'ಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ರಕ್ತದ ಮಡುವಿನಲ್ಲಿ ಒದ್ದಾಡಿ ಸಕಾಲಕ್ಕೆ ಆಂಬ್ಯುಲೆನ್ಸ್ ಸೇವೆ ಸಿಗದೆ ಜೀವ ಬಿಟ್ಟರೇ, ತೀವ್ರ ಗಾಯವಾಗಿದ್ದ ಮಗು ಹಾಗೂ ಪತ್ನಿಯನ್ನು ಸ್ಥಳೀಯರೇ ಆಂಬುಲೆನ್ಸ್ ಬಾರದ ಕಾರಣ ಒತ್ತಾಯ ಮಾಡಿ ಪೊಲೀಸ್ 112 ವಾಹನದಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಕೊನೆಗೂ ಟಿಪ್ಪರ್ ಲಾರಿ ಕೆಳಗೆ ಸಿಲುಕಿದ ಬೈಕ್ ಸವಾರ ಆಂಬುಲೆನ್ಸ್ ಬಾರದೆ ಅಪಘಾತ ಸ್ಥಳದಲ್ಲೇ ಒಂದು ಗಂಟೆಗೂ ಅಧಿಕ ಕಾಲ ನರಟಾಳ ನಡೆಸಿ ಸ್ಥಳೀಯರ ಸಹಾಯದಿಂದ ಕೊನೆಗೆ ಗೂಡ್ಸ್ ವಾಹನದ ಮೂಲಕ ಕುಂದಗೋಳ ತಾಲೂಕ ಆಸ್ಪತ್ರೆಗೆ ಸಾಗಿಸುವ ವೇಳೆಗೆ ಆತನ ಪ್ರಾಣ ಪಕ್ಷಿ ಹಾರಿ ಹೋಗಿದೆ.
ಮೃತ ವ್ಯಕ್ತಿ ಮಹಮ್ಮದಶಪಿಕ್ ನೂಲ್ವಿ (38) ಹುಬ್ಬಳ್ಳಿ ತಾಲೂಕಿನ ಶರೇವಾಡ ಗ್ರಾಮದವರೇಂದು ತಿಳಿದು ಬಂದಿದ್ದು, ಪತ್ನಿ ಮಗು ಸಮೇತ ಕುಂದಗೋಳ ತಾಲೂಕು ಆಸ್ಪತ್ರೆಗೆ ಬಂದು ಶರೇವಾಡಕ್ಕೆ ಮರಳುವ ವೇಳೆ ರಸ್ತೆ ಮದ್ಯೆ ಪೆಟ್ರೋಲ್ ಖಾಲಿಯಾಗಿ ನಿಂತಿದ್ದ ಬೈಕ್ ಸವಾರ ಓರ್ವನಿಗೆ ಸಹಾಯ ಮಾಡಲು ತೆರಳುವ ವೇಳೆ ಈ ಅಪಘಾತ ನಡೆದಿದೆ.
ಸದ್ಯ ಅಪಘಾತದಲ್ಲಿ ತೀವ್ರ ಗಾಯಗೊಂಡ ಪತ್ನಿ ರಿಯಾನಭಾನು ಮಗುವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದ್ದು ಆಸ್ಪತ್ರೆ ಬಳಿ ಕುಟುಂಬಸ್ಥರ ರೋಧನೆ ಮುಗಿಲು ಮುಟ್ಟಿದ್ದು ಸಮಯಕ್ಕೆ ಬಾರದ ಆಂಬುಲೆನ್ಸ್ ವಿರುದ್ಧ ಹರಿಹಾಯ್ದಿದ್ದಾರೆ.ಅಪಘಾತ ಸ್ಥಳಕ್ಕೆ ಕುಂದಗೋಳ ಗ್ರಾಮೀಣ ಪೊಲೀಸರು ಭೇಟಿ ನೀಡಿ ಟಿಪ್ಪರ್ ಲಾರಿಯಲ್ಲಿದ್ದ ಓರ್ವನನ್ನು ಬಂಧಿಸಿದ್ದು ಇನ್ನೋರ್ವ ಪರಾರಿಯಾಗಿದ್ದಾನೆ.
ಶ್ರೀಧರ ಪೂಜಾರ ಪಬ್ಲಿಕ್ ನೆಕ್ಸ್ಟ್
Kshetra Samachara
20/09/2022 05:36 pm