ಧಾರವಾಡ: ಹೊಲಕ್ಕೆಂದು ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವಿಗೀಡಾದ ಘಟನೆ ಧಾರವಾಡದ ಸವದತ್ತಿ ರಸ್ತೆಯಲ್ಲಿ ನಡೆದಿದೆ.
ಧಾರವಾಡ ಮಣಿಕಂಠ ನಗರದ ಮಂಜುನಾಥ ಬೆಟಗೇರಿ ಎಂಬುವರೇ ಸಾವಿಗೀಡಾದವರು.ಮಂಜುನಾಥ ಅವರು ಟ್ರ್ಯಾಕ್ಟರ್ ತೆಗೆದುಕೊಂಡು ಹೊಲಕ್ಕೆ ಹೊರಟಿದ್ದ ಸಂದರ್ಭದಲ್ಲಿ ಅವರ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಪಲ್ಟಿಯಾದ ನಂತರ ಚಾಲಕ ಮಂಜುನಾಥ ಅದರ ಬುಡದಲ್ಲಿ ಸಿಲುಕಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಸ್ಥಳಕ್ಕೆ ಬಂದ ಅವರ ಸಂಬಂಧಿಕರು ಮಂಜುನಾಥ ಸಾವಿಗೀಡಾಗಿದ್ದನ್ನು ಕಂಡು ಗೋಳಾಡುತ್ತಿದ್ದ ದೃಶ್ಯ ಕಂಡು ಬಂತು. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Kshetra Samachara
22/09/2022 03:36 pm