ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ ಮಾಡುತ್ತಿದ್ದಾಗ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಕಾರುಗಳು ಸಂಪೂರ್ಣವಾಗಿ ಜಖಂಗೊಂಡ ಘಟನೆ ಹುಬ್ಬಳ್ಳಿಯಲ್ಲಿ ತಡರಾತ್ರಿ ನಡೆದಿದೆ.
ಹುಬ್ಬಳ್ಳಿಯ ಸಂತೋಷ ನಗರದಲ್ಲಿ ನಿನ್ನೇ ತಡರಾತ್ರಿ ಸಾಯಿನಗರ ಕಡೆಯಿಂದ ಗೋಪನಕೊಪ್ಪ ಕಡೆ ಹೊರಟಿದ್ದ ಕಾರನ್ನು ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಅತಿವೇಗವಾಗಿ ಚಾಲನೆ ಮಾಡುತ್ತಿದ್ದಾಗ, ಸಂತೋಷ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರುಗಳು ಜಖಂಗೊಂಡು,ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಪೂರ್ವ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.
Kshetra Samachara
09/10/2022 10:50 am