ಹುಬ್ಬಳ್ಳಿ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಮೂವರ ಸವಾರರ ಸ್ಥಿತಿ ಗಂಭೀರವಾದ ಘಟನೆ ನಗರದ ಕೇಶ್ವಾಪೂರ ಸರ್ಕಲ್ ಬಳಿ ನಡೆದಿದೆ.
ಬೈಕ್ ಸವಾರ ವೇಗವಾಗಿ ಚಲಿಸಿ ನಿಯಂತ್ರಣ ತಪ್ಪಿ ಇನ್ನೊಂದು ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಸ್ಥಳದಲ್ಲೇ ಬಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಕೂಡಲೆ ಸ್ಥಳದಲ್ಲಿದ್ದ ಪೊಲೀಸರು ಮತ್ತು ಸಾರ್ವಜನಿಕರು ಬಂದು ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಳುಗಳು ಯಾರು ಎಂಬುದು ಇನ್ನು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
Kshetra Samachara
09/10/2022 01:31 pm