ಹುಬ್ಬಳ್ಳಿ: ಕುಸುಗಲ್ ರಸ್ತೆಯ ಗೋಲ್ಡನ್ ಜಿಮ್ ಮುಂಭಾಗದಲ್ಲಿ ಇಂದು (ಭಾನುವಾರ) ಬೆಳಗ್ಗೆ ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಹೇಮಂತ ನಗರದ ನಿವಾಸಿ ಷರೀಫ್ ಸಾಬ್ ಮೃತ ಬೈಕ್ ಸವಾರ. ಕುಸುಗಲ್ ರಸ್ತೆಯಲ್ಲಿ ಅತಿ ವೇಗವಾಗಿ ಡ್ಯುಕ್ ಬೈಕ್‌ನಲ್ಲಿ ಹೊರಡಿದ್ದ ಷರೀಫ್ ಸಾಬ್ ನಿಯಂತ್ರಣ ತಪ್ಪಿ ರಸ್ತೆ ದಾಟುತ್ತಿದ್ದ ಇನ್ನೊಂದು ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಅಪಘಾತದಲ್ಲಿ ಎರಡೂ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಇಬ್ಬರನ್ನೂ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದರು ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಷರೀಫ್ ಸಾಬ್ ಸಾವನ್ನಪ್ಪಿದ್ದಾನೆ. ಈ ಸಂಬಂಧ ಹುಬ್ಬಳ್ಳಿಯ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
09/10/2022 10:02 pm