ಹುಬ್ಬಳ್ಳಿ: ಲಕ್ಷ್ಮೇಶ್ವರದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ಹುಬ್ಬಳ್ಳಿ ಕುಂದಗೋಳ ರಸ್ತೆಯಲ್ಲಿ ನಡೆದಿದೆ.
ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 60ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಶೆರೆವಾಡ ಬಳಿ ಪಲ್ಟಿಯಾಗಿದೆ. ಘಟನೆಯಲ್ಲಿ ಕೆಲವೊಂದಿಷ್ಟು ಜನರಿಗೆ ಗಾಯವಾಗಿದ್ದು ಬಸ್‌ನಲ್ಲಿಯೇ ಕೆಲವರು ಸಿಲುಕಿದ್ದಾರೆ. ಇನ್ನು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಆಗಮಿಸಿದ್ದು ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಹಾಗೂ ವಿದ್ಯಾರ್ಥಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
10/10/2022 08:38 am