ಧಾರವಾಡ: ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಧಾರವಾಡದಲ್ಲಿ ನಡೆದಿದೆ.
ಮಳೆ ಬರುತ್ತಿದ್ದರೂ ಲಾರಿ ಚಾಲಕ ವೇಗವಾಗಿ ಚಾಲನೆ ಮಾಡಿಕೊಂಡು ಬರುತ್ತಿದ್ದಾಗ ಲಾರಿ ನಿಯಂತ್ರಣಕ್ಕೆ ಸಿಗದೆ ಮುಂದೆ ಬರುತ್ತಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಲಾರಿ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾನೆ. ಅಪಘಾತ ಆಗುತ್ತಿದ್ದಂತೆ ಲಾರಿ ಚಾಲಕ ಲಾರಿಯನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/10/2022 09:44 am