ಧಾರವಾಡ: ಪ್ರಸಕ್ತ ವರ್ಷ ಹಾನಿಯಾದ ರೈತರ ಬೆಳೆಗಳಿಗೆ ಹಾಗೂ ಹಾನಿಯಾದ ಮನೆಗಳಿಗೆ ತಕ್ಷಣವೇ ಪರಿಹಾರ ಬಿಡುಗಡೆ ಮಾಡುವಂತೆ ನವ ಕರ್ನಾಟಕ ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ರೈತರು, ಪ್ರಸಕ್ತ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಕೆಲವೇ ರೈತರಿಗೆ ಮಾತ್ರ ಪರಿಹಾರ ಸಿಕ್ಕಿದೆ. ಇನ್ನು ಕೆಲವರಿಗೆ ಸಿಕ್ಕಿಲ್ಲ ಎಂದು ದೂರಿದರು. ಪರಿಹಾರ ಸಿಗದ ರೈತರಿಗೂ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು. ಬೆಂಬಲ ಬೆಲೆ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.
Kshetra Samachara
03/11/2020 04:42 pm