ಧಾರವಾಡ: ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಭಾರತ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು, ರೈತರು ಧಾರವಾಡದ ಆಲೂರು ವೆಂಕಟರಾವ್ ವೃತ್ತವನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಎಪಿಎಂಸಿ ಕಾಯ್ದೆ ಹಾಗೂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬುದು ರೈತರ ಒತ್ತಾಯವಾಗಿದೆ. ಹೀಗಾಗಿ ಭಾರತ ಬಂದ್ ಗೆ ಕರೆ ನೀಡಲಾಗಿದ್ದು, ಧಾರವಾಡದಲ್ಲಿ ಕೆಲ ರೈತ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಂದ್ ಗೆ ಬೆಂಬಲ ಸೂಚಿಸಿದರು.
Kshetra Samachara
08/12/2020 12:19 pm