ಅಣ್ಣಿಗೇರಿ : ಎಪಿಎಂಸಿ ಕಾಯ್ದೆ ಹಾಗೂ ಭೂ ಸುಧಾರಣಾ ಕಾಯ್ದೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಪ್ರಗತಿಪರರು ನೀಡಿದ ಭಾರತ್ ಬಂದ್ ಗೆ ಅಣ್ಣಿಗೇರಿ ಪಟ್ಟಣದಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ಅಣ್ಣಿಗೇರಿಯ ರೈತ ಹೋರಾಟ ಸಮಿತಿಯ ಕಾರ್ಯಕರ್ತರು ಅಣ್ಣಿಗೇರಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ರೋಡಿಗಳಿದು ಪ್ರತಿಭಟನೆ ನಡೆಸಿ. ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಬಳಿಕ ತಹಶೀಲ್ದಾರಗೆ ಮನವಿ ಪತ್ರ ಸಲ್ಲಿಸಿ ಕೇಂದ್ರ ಸರ್ಕಾರ ನೂತನವಾಗಿ ಹೊರಡಿಸಿರುವ ಕೃಷಿ ನೀತಿ ಹಾಗೂ ಎಪಿಎಂಸಿ ಕಾಯ್ದೆಯ ಮಂಡನೆಯನ್ನು ಹಿಂಪಡೆಯಬೇಕು. ಇಲ್ಲವಾದ್ರೆ ಈ ಹೋರಾಟ ಉಗ್ರ ಸ್ವರೂಪ ಪಡೆಯುತ್ತದೆ ಎಂದು ಎಚ್ಚರಿಸಿದರು.
Kshetra Samachara
08/12/2020 03:12 pm