ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವಿಧಾನಸಭೆಯತ್ತ ನಾಳೆ ಧಾರವಾಡ ರೈತರು

ಧಾರವಾಡ: ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ರೈತರು ಬೆಂಗಳೂರಿನ ವಿಧಾನಸಭೆಗೆ ಮುತ್ತಿಗೆ ಹಾಕಲು ಸಜ್ಜಾಗಿದ್ದು, ಧಾರವಾಡದಿಂದಲೂ 200 ಜನ ರೈತರು ಬೆಂಗಳೂರಿಗೆ ಹೊರಡಲು ಸಿದ್ಧರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಅಧ್ಯಕ್ಷ ಕಲ್ಮೇಶ ಲಿಗಾಡಿ ಹೇಳಿದರು.

ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಅವರು, ರೈತರು ಬರುವಾಗ ಒಂದು ಬಾರಕೋಲು ಹಾಗೂ ಹಸಿರು ಶಾಲು ತರಬೇಕು. ಬಾರಕೋಲನ್ನಾದರೂ ಬೀಸಿದರೆ ಸರ್ಕಾರ ಎಚ್ಚೆತ್ತುಕೊಳ್ಳುತ್ತದೆಯೇ ಎಂಬುದನ್ನು ನೋಡಬೇಕಿದೆ. ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ವಿಧಾನಸಭೆಗೆ ಮುತ್ತಿಗೆ ಹಾಕಿ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಲಿದ್ದೇವೆ ಎಂದರು.

Edited By : Manjunath H D
Kshetra Samachara

Kshetra Samachara

08/12/2020 03:16 pm

Cinque Terre

36.37 K

Cinque Terre

2

ಸಂಬಂಧಿತ ಸುದ್ದಿ