ಗದಗ : ತಾಲೂಕಿನ ಕಣವಿ ಶ್ರೀ ವೀರಭದ್ರೇಶ್ವರ ಆಗ್ರೋ ಕೇಂದ್ರ ಕೃಷಿ ಪರಿಕರ ಮಾರಾಟ ಮಳಿಗೆಗೆ ಗುರುವಾರ ಅ.1 ರಂದು ಸಹಾಯಕ ಕೃಷಿ ನಿರ್ದೇಶಕ ಸಂತೋಷ ಪಟ್ಟದಕಲ್ ಭೇಟಿ ನೀಡಿ ಪರಿಶೀಲಿಸಿದ ಈ ವೇಳೆ ಕೀಟನಾಶಕ ಪರವಾನಿಗೆಯಲ್ಲಿ ಅನುಮತಿಸದೇ ಇರುವ ಕೀಟನಾಶಕಗಳನ್ನು ದಾಸ್ತಾನು ಮತ್ತು ವಿತರಣೆ, ನೋಂದಾಯಿತವಲ್ಲದ ಕೀಟನಾಶಕಗಳನ್ನು ದಾಸ್ತಾನು ಮತ್ತು ವಿತರಣೆ ಹಾಗೂ ಕೀಟನಾಶಕಗಳ ದಾಸ್ತಾನು ಷರತ್ತುಗಳನ್ನು ಉಲ್ಲಂಘಿಸಿರುವುದು ದೃಢಪಟ್ಟಿದೆ. ಈ ಕಾರಣ ಕೀಟನಾಟಕ ಕಾಯ್ದೆ 1968 ಹಾಗೂ ಕೀಟನಾಶಕ ನಿಯಮಗಳು 1971 ರನ್ವಯ ಶ್ರೀ ವೀರಭದ್ರೇಶ್ವರ ಅಗ್ರೋ ಕೇಂದ್ರ ಕಣವಿ ಇವರ ಪರವಾನಿಗೆಯನ್ನು ಅಮಾನತ್ತಿನಲ್ಲಿಟ್ಟು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಆದೇಶಿಸಿದ್ದಾರೆ.
Kshetra Samachara
03/10/2020 09:37 am