ಧಾರವಾಡ ಜಿಲ್ಲೆಯಲ್ಲಿ ಹೆಸರು ಖರೀದಿ ಕೇಂದ್ರ ತೆರೆಯಲು ಸರ್ಕಾರದಿಂದ ಗ್ರೀನ್ ಸಿಗ್ನಲ್

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಬೆಂಬಲ ಬೆಲೆಯಡಿ ಹೆಸರು ಖರೀದಿ ಮಾಡಲು ಖರೀದಿ ಕೇಂದ್ರ ತೆರೆಯುವುದಕ್ಕಾಗಿ ಸರ್ಕಾರದಿಂದ ಪರವಾನಿಗಿ ಬಂದಿದ್ದು, ಶುಕ್ರವಾರದಿಂದ ನೋಂದಣಿ ಕಾರ್ಯ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹೇಳಿದರು.

ಬಲ್ಲರವಾಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಸರು ಖರೀದಿ ಕೇಂದ್ರ ತೆರೆಬೇಕು ಎಂದು ಬಹಳ ಬೇಡಿಕೆ ಬಂದಿತ್ತು. ಬುಧವಾರವಷ್ಟೆ ಖರೀದಿ ಕೇಂದ್ರ ತೆರೆಯಲು ಸರ್ಕಾರಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಶುಕ್ರವಾರದಿಂದ ನೋಂದಣಿ ಕಾರ್ಯ ಆರಂಭವಾಗಲಿದೆ. ಆ ಮೂಲಕ ರೈತರು ಬೆಳೆದ ಹೆಸರು ಕಾಳುಗಳನ್ನು ಸರ್ಕಾರ ಬೆಂಬಲ ಬೆಲೆಯಡಿ ಖರೀದಿ ಮಾಡಲಿದೆ ಎಂದರು.

ಧಾರವಾಡ ಜಿಲ್ಲೆಯಲ್ಲಿ 72 ಸಾವಿರ ಹೆಕ್ಟೇರ್ ಕೃಷಿ ಭೂಮಿ ಹಾಗೂ 6 ಸಾವಿರ ಹೆಕ್ಟೇರ್ ತೋಟಗಾರಿಕಾ ಭೂಮಿ ಮಳೆಯಿಂದ ಹಾನಿಗೀಡಾಗಿದೆ ಎಂಬ ಪರಿಷ್ಕೃತ ವರದಿಯನ್ನು ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದೇವೆ.

ಪ್ರಸಕ್ತ ವರ್ಷ ಮಳೆಯಿಂದಾಗಿ ಜಿಲ್ಲೆಯಲ್ಲಿ 582 ಕೋಟಿಯಷ್ಟು ಮೂಲ ಸೌಕರ್ಯಗಳು ಹಾನಿಗೀಡಾಗಿವೆ. ಈಗಾಗಲೇ ಕೇಂದ್ರ ಅಧ್ಯಯನ ತಂಡ ಕೂಡ ಬಂದು ಪರಿಶೀಲನೆ ಮಾಡಿಕೊಂಡು ಹೋಗಿದೆ.

ಈಗಾಗಲೇ ಸರ್ಕಾರದಿಂದ ತಕ್ಷಣಕ್ಕೆ 5 ಕೋಟಿ ಅನುದಾನ ಮಂಜೂರಾಗಿದೆ ಹಾಗೂ ಲೋಕೋಪಯೋಗಿ ಇಲಾಖೆಗೆ 19 ಕೋಟಿ ಅನುದಾನ ಸರ್ಕಾರದಿಂದ ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Kshetra Samachara

Kshetra Samachara

11 days ago

Cinque Terre

12.23 K

Cinque Terre

1

  • Skumar
    Skumar

    ರೈತರಿಗೆ ಅನುಕೂಲಕರವಾಗಲಿದೆ, ಧನ್ಯವಾದಗಳು ಸರ್.