ಹುಬ್ಬಳ್ಳಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ತಿದ್ದುಪಡಿಗಳನ್ನು ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಳಸಾ-ಬಂಡೂರಿ ರೈತ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಕೃಷಿ, ಎಪಿಎಂಸಿ ಮತ್ತು ಅಗತ್ಯ ವಸ್ತುಗಳ ಸಂಗ್ರಹ ತಿದ್ದುಪಡಿ ಕಾಯ್ದೆಗಳು ಮತ್ತು ಗೋ ಹತ್ಯೆ ನಿಷೇಧ ಕಾಯ್ದೆ ವಿದ್ಯುತ್ ಕಾಯ್ದೆ ಹಿಂಪಡೆಯಬೇಕೆಂದು ಆಗ್ರಹಿಸಿದರು.
ಈ ತಿದ್ದುಪಡಿಗಳು ರೈತ ವಿರೋಧಿಯಾಗಿವೆ. ಇವುಗಳಿಂದ ರೈತರಿಗೆ ಯಾವುದೇ ಅನುಕೂಲವಿಲ್ಲ. ಹೀಗಾಗಿ ಕಾಯ್ದೆಗಳನ್ನು ಹಿಂಪಡೆಯಬೇಕು. ಇಲ್ಲವಾದರೆ ಮುಂದಿನದಿನಗಳಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.
Kshetra Samachara
31/12/2020 12:25 pm