ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಜ. 26 ರಂದು ಪರ್ಯಾಯ ರೈತ ಗಣರಾಜ್ಯೋತ್ಸವ- ಕುರುಬೂರು ಶಾಂತಕುಮಾರ

ಹುಬ್ಬಳ್ಳಿ: ದೆಹಲಿ ರೈತರ ಹೋರಾಟ ಬೆಂಬಲಿಸಿ ಜ. 26 ರಂದು ರೈತರ ಗಣರಾಜ್ಯೋತ್ಸವ ಪರೆಡ್ ಹಮ್ಮಿಕೊಳ್ಳಲಾಗಿದೆ. ಅಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ , ಮೋಟಾರ್ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 52 ದಿನಗಳಿಂದ ರೈತರು ಹೋರಾಟ ಮಾಡಿ ತಮ್ಮ ಪ್ರಾಣವನ್ನು ಬಲಿದಾನ ಮಾಡಿದ್ದಾರೆ. ಆದ್ರೆ ಕೇಂದ್ರ ಸರ್ಕಾರ ಇಲ್ಲಿಯವರಗೂ ಯಾವುದೇ ಸಮಸ್ಯೆ ಬಗೆಹರಿಸಿಲ್ಲ. ರೈತರ ಬಗ್ಗೆ ಕಾಳಜಿ ಇಲ್ಲ. ಪ್ರಜಾಪ್ರಭುತ್ವ ವಿರೋಧಿ ಕೃಷಿ ಕಾಯ್ದೆ ಜಾರಿಗೆ ತರಲಾಗಿದೆ. ಚಳವಳಿ ಹತ್ತಿಕ್ಕಲು ವಾಮಮಾರ್ಗ ಅನುಸರಿಸುತ್ತಿದೆ. ಆದ್ರೆ ಯಾವುದೇ ವಾಮಮಾರ್ಗಕ್ಕೆ ರೈತರು ಬಗ್ಗುವದಿಲ್ಲ ಎಂದು ಎಚ್ಚರಿಕೆ ‌ನೀಡಿದರು.

ಜ. 26 ರಂದು ಪರ್ಯಾಯ ಗಣರಾಜೋತ್ಸವ ಪರೆಡ್ ದೇಶದ ಉದ್ದಗಲಕ್ಕೂ ಮಾಡಲಾಗುತ್ತಿದೆ. ಅಂದು ಬೆಂಗಳೂರಿನಲ್ಲಿಯೂ ಬೃಹತ್ ಸಂಖ್ಯೆಯಲ್ಲಿ ಟ್ರ್ಯಾಕ್ಟರ್, ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ರಾಜ್ಯ ಸಮಿತಿ ಸಭೆ ಕರೆದು ಚರ್ಚಿಸಿದ್ದು 15 ಸಾವಿರಕ್ಕೂ ಹೆಚ್ಚು ವಾಹನಗಳು ಭಾಗಿಯಾಗಲಿದ್ದು, ಎಲ್ಲಾ ಸಂಘಟನೆಗಳು ಸ್ವಯಂಪ್ರೇರಿತವಾಗಿ ಭಾಗಿಯಾಗಲಿವೆ ಎಂದರು.

Edited By : Manjunath H D
Kshetra Samachara

Kshetra Samachara

18/01/2021 02:35 pm

Cinque Terre

16.68 K

Cinque Terre

1

ಸಂಬಂಧಿತ ಸುದ್ದಿ