ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎಪಿಎಂಸಿ ಹಾಗೂ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ ವಿರೋಧಿಸಿ ನವಲಗುಂದ ತಾಲೂಕಿನ ಶಿರೂರು ಗ್ರಾಮದ ರೈತರು ಶಿರೂರು ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಈ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪಂಜಾಬ್ ಹಾಗೂ ಹರಿಯಾಣಾ ರಾಜ್ಯದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಅದರ ಬೆಂಬಲಾರ್ಥವಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ರೈತರು ಹೆದ್ದಾರಿ ತಡೆಯುತ್ತಿದ್ದಾರೆ. ಅದರ ಅಂಗವಾಗಿ ನವಲಗುಂದ ತಾಲೂಕಿನ ಶಿರೂರು ಗ್ರಾಮದ ರೈತರು ಕೂಡ ಶಿರೂರು, ಕಿತ್ತೂರು, ಬೀಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಬಂದ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ರೈತ ಮುಖಂಡ ಮಲ್ಲಿಕಾರ್ಜುನಗೌಡ ಬಾಳನಗೌಡ ಈ ಪ್ರತಿಭಟನೆಯಲ್ಲಿ ನೇತೃತ್ವ ವಹಿಸಿದ್ದರು.
Kshetra Samachara
06/02/2021 11:44 am