ಹುಬ್ಬಳ್ಳಿ: ಕ್ವಿಟ್ ಇಂಡಿಯಾ ಚಳುವಳಿ ನೆನಪಿನಲ್ಲಿ, ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕೆಂದು, ಸಿಐಟಿಯು ಸಂಘಟನೆ ಕಾರ್ಯಕರ್ತರು, ನಗರದ ತಹಶೀಲ್ದಾರರ ಕಚೇರಿ ಎದುರುಗಡೆ ಪ್ರತಿಭಟನೆ ಮಾಡಿದರು.
ಕೇಂದ್ರ ಸರಕಾರ ಮೂರು ರೈತ ವಿರೋಧಿ ಕಾಯ್ದೆಯನ್ನು ಜಾರಿ ಮಾಡಿ, ರೈತರಿಗೆ ಅನ್ಯಾಯ ಮಾಡಿದೆ. ಎಲ್ಲಾ ಕ್ಷೇತ್ರವನ್ನು ಖಾಸಗೀಕರಣ ಮಾಡುತ್ತಿರುವ ಸರಕಾರ, ರೈತರ ಮಾರುಕಟ್ಟೆಯನ್ನು ಖಾಸಗೀಕರಣ ಮಾಡಿ, ಎಲ್ಲಾ ರೈತರ ಅವನತಿಗೆ ಕಾರಣವಾಗುತ್ತಿದೆ, ಆದ್ದರಿಂದ ಇಂದು ಕ್ವಿಟ್ ಇಂಡಿಯಾ ಚಳುವಳಿ ದಿನವಾಗಿದ್ದರಿಂದ, ರೈತರ ಅನುಕೂಲಕ್ಕಾಗಿ ರೈತ ವಿರೋಧಿ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ತಹಶೀಲ್ದಾರರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ನೀಡಿದರು.
Kshetra Samachara
09/08/2021 03:17 pm