ಹುಬ್ಬಳ್ಳಿ: ಈರುಳ್ಳಿ ಬೆಳೆದ ರೈತರು ಕಣ್ಣೀರು ಹಾಕುತ್ತಿದ್ದಾರೆ. ನಿರಂತರಾವಗಿ ಸುರಿದ ಮಳೆಯಿಂದ ಬೆಳೆ ಕಳೆದುಕೊಂಡು ಕಂಗಾಲಾಗಿದ್ದ ಈರುಳ್ಳಿ ಬೆಳೆಗಾರರಿಗೆ, ಈರುಳ್ಳಿ ಬೆಲೆ ಪಾತಾಳಕ್ಕೆ ಕುಸಿದಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ..
ನಿರಂತರವಾಗಿ ಸುರಿದ ಮಳೆಯಿಂದ ಮನೆ ಕಳೆದುಕೊಂಡು ಜನರ ಬದುಕು ಬೀದಿಗೆ ಬಂದಿದೆ. ಮತ್ತೊಂದೆಡೆ ಸತತವಾಗಿ ಸುರಿದ ಮಳೆಯಿಂದಾಗಿ ಕಳೆದೆರಡು ವರ್ಷಗಳಿಂದ ಬೆಳೆ ನಾಶವಾಗಿ ಕಂಗೆಟ್ಟಿದ್ದ ರೈತರಿಗೆ ಈಗ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪ್ರವಾಹಕ್ಕೆ ಕೊಚ್ಚಿ ಹೋಗಿ ಅಳಿದುಳಿದಿದ್ದ ಈರುಳ್ಳಿಯನ್ನ ರೈತರು ಕಾಪಾಡಿಕೊಂಡಿದ್ದರು. ಸಾಲ ಮಾಡಿ ಈರುಳ್ಳಿ ಬೆಳೆದ ರೈತರು ಈಗ ಬೆಲೆ ಇಲ್ಲದೆ ಕಂಗಾಲಾಗಿದ್ದಾರೆ. ಹುಬ್ಬಳ್ಳಿ ಎಪಿಎಂಸಿ ಸೇರಿದಂತೆ ಬಹುತೇಕ ಕಡೆಗಳಲ್ಲಿ ಭಾರಿ ಪ್ರಮಾಣದಲ್ಲಿ ಈರುಳ್ಳಿ ಬೆಲೆ ಕುಸಿತ ಕಂಡಿದೆ. ಮಾರುಕಟ್ಟೆ ಗೆ ಈರುಳ್ಳಿ ಬರಲು ಸುರುವಾಗುತ್ತಿದ್ದಂತೆ ದಿಡೀರ್ ಅಂತಾ ಈರುಳ್ಳಿ ಬೆಲೆ ಪಾತಾಳಕ್ಕೆ ಕುಸಿದಿದೆ. ಈರುಳ್ಳಿ ಬೆಳೆದ ರೈತರು ಕಣ್ಣೀರು ಹಾಕುವಂತಾಗಿದೆ. ಕ್ವಿಂಟಾಲಿಗೆ 5 ಸಾವಿರಕ್ಕೂ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದ್ದ ಈರುಳ್ಳಿ ಕನಿಷ್ಠ 400 ರೂಪಾಯಿಯಿಂದ ಗರಿಷ್ಠ 2000 ರೂಪಾಯಿಗೆ ಕುಸಿದಿದ್ದು, ಈರುಳ್ಳಿ ಬೆಳೆಗಾರರನ್ನ ದಿಕ್ಕು ತೋಚದಂತೆ ಮಾಡಿದೆ.
400 ರೂಪಾಯಿಗೆ ಕ್ವಿಂಟಾಲ್ ಈರುಳ್ಳಿ ಮಾರಾಟ ಮಾಡುವ ಸ್ಥಿತಿ ನಿರ್ಮಾಣವಾಗಿರುವುದಕ್ಕೆ ಆಕ್ರೋಶಗೊಂಡ ರೈತರು ಹೊಲದಲ್ಲಿಯೆ ಈರುಳ್ಳಿ ರಾಶಿ ಹಾಕಿದ್ದಾರೆ. ಕಳೆದ ವರ್ಷವು ಬೆಲೆ ಕುಸಿದ ಪರಿಣಾಮ ರಸ್ತೆ ತಡೆದು ರೈತರು ಪ್ರತಿಭಟನೆ ಮಾಡಿದರು. ವ್ಯಾಪಾರಸ್ಥರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ವರ್ಷವು ಮತ್ತೆ ಬೆಲೆ ಕುಸಿತವಾಗಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿವರ್ಷ ಈರುಳ್ಳಿ ಬೆಳೆ ಬರುತ್ತಿದ್ದಂತೆ ಮಾರುಕಟ್ಟೆ ಯಲ್ಲಿ ಬೆಲೆ ಕುಸಿತವಾಗುತ್ತಿದ್ದು, ಸರಕಾರ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ಸಂಕಷ್ಟದಲ್ಲಿರುವ ರೈತರ ನೆರವಿಗೆ ಬಂದು ದರ ನಿಗದಿ ಮಾಡುವಂತೆ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಪ್ರವಾಹದಿಂದ ತತ್ತರಿಸಿ ಹೋಗಿದ್ದ ರೈತರು, ಈಗ ಈರುಳ್ಳಿ ಬೆಲೆ ಪಾತಾಳಕ್ಕೆ ಕುಸಿದಿರುವುದರಿಂದ ಕಣ್ಣೀರು ಹಾಕುತ್ತಿದ್ದಾರೆ. ಈರುಳ್ಳಿಗೆ ಬೆಂಬಲ ಬೆಲೆ ಘೋಷಣೆ ಮಾಡುವ ಮೂಲಕ, ಕಣ್ಣೀರು ಹಾಕುತ್ತಿರುವ ರೈತರ ಕಣ್ಣೀರು ಒರೆಸಲು ಸರ್ಕಾರ ಮುಂದಾಗಬೇಕಿದೆ..
ಮಲ್ಲೇಶ ಸೂರಣಗಿ,
ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
Kshetra Samachara
12/10/2021 06:16 pm