ಗದಗ: ಗದಗ ತಾಲೂಕಿನ ಮುಳಗುಂದ ವ್ಯಾಪ್ತಿಯಲ್ಲಿ ಸಾವಿರಾರು ಎಕರೆಯಲ್ಲಿ ಬೆಳೆದ ಮೆಣಸಿನಕಾಯಿ ಬೆಳೆಗೆ ನಿಗೂಢ ರೋಗ ಕಾಣಿಸಿಕೊಂಡ ಹಿನ್ನೆಲೆ ಸ್ಥಳಕ್ಕೆ ಕೃಷಿ ಅಧಿಕಾರಿಗಳ ಭೇಟಿ ನೀಡಿತು.
ವೈರಸ್ ನಿಂದಾಗಿ ಮೆಣಸಿನಕಾಯಿಗೆ ಕಪ್ಪುಗಟ್ಟಿದ್ದ ಹಿನ್ನೆಲೆ ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಸಹಾಯಕ ಕೃಷಿ ನಿರ್ದೇಶಕ ರವಿ ಪಿಆರ್, ಹಿರಿಯ ಸಹಾಯಕ ತೋಟಗಾರಿಗೆ ನಿರ್ದೇಶಕ ಶೈಲೇಂದ್ರ ಬಿರಾದಾರ, ವಿಜ್ಞಾನ ಕೃಷಿ ವಿಸ್ತೀರ್ಣ ಶಿಕ್ಷಣ ಕೇಂದ್ರದ ವಿಜ್ಞಾನಿ ಸಿಎಮ್ ರಫಿಕ್ ಅವರಿಂದ ಪರಿಶೀಲನೆ ನಡೆಸಲಾಯಿತು.ಸತತ ಮಳೆಯಿಂದ ಚಿಬ್ಬು ರೋಗ ತಗುಲಿದ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು. ಮುಳಗುಂದ ಪಟ್ಟಣ ವ್ಯಾಪ್ತಿಯಲ್ಲಿ 1200 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಮೆಣಸಿನಕಾಯಿ ಪ್ರತಿಶತ ನೂರರಷ್ಟು ಬೆಳೆ ನಾಶವಾಗಿದೆ. ಈ ಬಗ್ಗೆ ವರದಿ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಹೆಕ್ಟೇರ್ ಗೆ 6,800 ರೂಪಾಯಿ ಬೆಲೆ ಹರಿಹಾರ ಸಿಗಲಿದೆ. ಹೆಚ್ಚುವರಿ ಪ್ರದೇಶದಲ್ಲಿ ಬೆಳೆ ನಾಶವಾಗಿದ್ದರೆ ಪರಿಶೀಲನೆ ನಡೆಸಲಾಗುತ್ತದೆ ಎಂದು ತೋಟಗಾರಿಗೆ ಇಲಾಖೆ ಉಪ ನಿರ್ದೇಶಕ ರವಿ ಪಿಆರ್ ಮಾಹಿತಿ ನೀಡಿದರು.
Kshetra Samachara
10/12/2021 08:20 pm