ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕೇಂದ್ರ ಸರ್ಕಾರದ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ

ಧಾರವಾಡ: ಕೇಂದ್ರ ಸರ್ಕಾರದ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ ಯೋಜನೆಯನ್ವಯ (ಏಅಅ) ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ಜಾನುವಾರುಗಳ ನಿರ್ವಹಣಾ ವೆಚ್ಚ ಭರಿಸಲು ರಾಷ್ಟೀಕೃತ ಬ್ಯಾಂಕ್, ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ನವೆಂಬರ್ 15, 2021 ರಿಂದ ಫೆಬ್ರವರಿ 15, 2022 ರವರೆಗೆ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಕೊಂಡ ಆಸಕ್ತ ರೈತರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಗಳನ್ನು ಪಡೆದು ಅರ್ಜಿ ಸಲ್ಲಿಸಬಹುದು. ಅವಶ್ಯಕ ದಾಖಲಾತಿಗಳಾದ ಆಧಾರ ಕಾರ್ಡ್, ಝರಾಕ್ಸ ಪ್ರತಿ, ಪಾಸ್‍ಪೋರ್ಟ್ ಸೈಜ್ 02 ಭಾವಚಿತ್ರ, ಬ್ಯಾಂಕ್ ಪಾಸ್ ಪುಸ್ತಕದ ಝರಾಕ್ಸ ಪ್ರತಿ, ಜಾನುವಾರುಗಳನ್ನು ಹೊಂದಿರುವ ಬಗ್ಗೆ ಧೃಡಿಕರಣ ಪತ್ರ. (ಪಶುವೈದ್ಯರಿಂದ), ಅರ್ಜಿದಾರರಿಂದ ಮುಚ್ಚಳಿಕೆ ಪತ್ರ, ಅರ್ಜಿದಾರರು ಪ.ಜಾ ಅಥವಾ ಪ.ಪಂ.ಗಳಿಗೆ ಸೇರಿದ್ದಲ್ಲಿ ಜಾತಿ ಪ್ರಮಾಣ ಪತ್ರದ ದಾಖಲೆಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು ಎಂದು ಧಾರವಾಡ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

13/12/2021 10:00 pm

Cinque Terre

2.02 K

Cinque Terre

0

ಸಂಬಂಧಿತ ಸುದ್ದಿ