ನವಲಗುಂದ : ರೈತರಿಗೆ ಇದುವರೆಗೂ ಒಂದಿಲ್ಲೊಂದು ಸಮಸ್ಯೆ ಕಾಡುತ್ತಲೇ ಬಂದಿದೆ. ಇದಕ್ಕೆ ಉತ್ತಮ ನಿದರ್ಶನ ಅಂದ್ರೆ ನವಲಗುಂದ ತಾಲ್ಲೂಕಿನ ಅಳಗವಾಡಿ ಗ್ರಾಮದ ರೈತರೊಬ್ಬರಿಗೆ ಕಾಡಿದ ಹಂದಿಗಳ ಕಾಟ..
ಹೌದು ಅಳಗವಾಡಿ ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ ಶ್ರೀಕಾಂತ್ ತಾಳಿಕೋಟೆ ಎಂಬುವವರಿಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ಬೆಳೆದ ಗೋವಿನಜೋಳ ಈಗ ಹಂದಿಯ ದಾಳಿಗೆ ಸಂಪೂರ್ಣ ನಾಶವಾಗಿದ್ದು, ರೈತ ಕಂಗಾಲಾಗಿದ್ದಾನೆ.
ಈ ಬಗ್ಗೆ ರೈತ ಸಂಬಂಧ ಪಟ್ಟ ಗ್ರಾಮ ಪಂಚಾಯತ್ ಗೆ ಮತ್ತು ಪೊಲೀಸ್ ಠಾಣೆಗೆ ಹಂದಿಗಳ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ರೆ ಯಾರು ಸಹ ಸ್ಪಂದಿಸುತ್ತಿಲ್ಲ ಎಂದು ನೊಂದ ರೈತ ತನ್ನ ಅಳಲನ್ನು ತೊಡಿಕೊಂಡಿದ್ದಾನೆ.
ವಿನೋದ ಇಚ್ಚಂಗಿ, ಪಬ್ಲಿಕ್ ನೆಕ್ಸ್ಟ್ ನವಲಗುಂದ...
Kshetra Samachara
20/12/2021 06:23 pm