ಧಾರವಾಡ: ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿಸಿದ ಎಲ್ಲ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ. ಇ-ಕೆವೈಸಿ ಮಾಡಿಕೊಳ್ಳಲು ಫಲಾನುಭವಿಗಳು https://pmkisan.gov.in ವೆಬ್‍ಸೈಟ್ ಮುಖಾಂತರ ಅಥವಾ ಪಿಎಂ ಕಿಸಾನ್ ಮೊಬೈಲ್ ಆ್ಯಪ್ ಮುಖಾಂತರ ಫಲಾನುಭವಿಗಳು ತಾವೇ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ.
ಇ-ಕೆವೈಸಿ ಮಾಡಿಕೊಳ್ಳುವ ವಿಧಾನ: ಇ-ಕೆವೈಸಿ ಓಟಿಪಿ ಮುಖಾಂತರ ಆಧಾರ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾದ ಫಲಾನುಭವಿಗಳು https://pmkisan.gov.in ವೆಬ್‍ಸೈಟ್‍ನಲ್ಲಿ ಇ-ಕೆವೈಸಿ ಲಿಂಕ್ ಮೇಲೆ ಕ್ಲಿಕಿಸಿ ಆಧಾರ ನಂಬರ್ ಹಾಗೂ ಕ್ಯಾಪ್‍ಚಾ ನಮೂದಿಸಿ ತದನಂತರ ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ದಾಖಲಿಸಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ.
ಇ-ಕೆವೈಸಿ ಬಯೋಮೆಟ್ರಿಕ್ ಮುುಖಾಂತರ ಆಧಾರ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಓಟಿಪಿ ಸೃಜನೆಯಾಗದ ರೈತರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (CSC) ಕ್ಕೆ ಭೇಟಿ ನೀಡಿ ಆಧಾರ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ನಮೂದಿಸಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳು ನಮೂದಿಸಿ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ. ಈ ಪ್ರಕ್ರಿಯೆಗಾಗಿ ಸಿಎಸ್‍ಸಿ ಕೇಂದ್ರದವರು ಎಲ್ಲ ಟ್ಯಾಕ್ಸ ಒಳಗೊಂಡಂತೆ, 15 ರೂಪಾಯಿಗಳನ್ನು ಮಾತ್ರ ಪ್ರತಿ ಫಲಾನುಭವಿಯಿಂದ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ರೈತ ಬಾಂಧವರು ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರನ್ನು ಭೇಟಿ ನೀಡಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
20/12/2021 09:40 pm