ಧಾರವಾಡ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜನೇವರಿ 2022 ರಿಂದ ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದಲ್ಲಿ ಧಾರವಾಡ, ಗದಗ, ಹಾವೇರಿ, ಕಾರವಾರ ಜಿಲ್ಲೆಗಳ ರೈತ ಹಾಗೂ ರೈತ ಮಹಿಳೆಯರಿಗೆ ಎರಡು ದಿನಗಳ ಅವಧಿಯ ತಂಡವಾರು ಉಚಿತವಾಗಿ ವೈಜ್ಞಾನಿಕ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆಯ ತರಬೇತಿಯನ್ನು ನೀಡಲಾಗುತ್ತದೆ.
ಆಸಕ್ತಿಯುಳ್ಳ ರೈತರು ತಮ್ಮ ಹೆಸರನ್ನು ಎಸ್‍ಎಂಎಸ್ ಸಂದೇಶದ ಮೂಲಕ ಅಥವಾ ಕಛೇರಿಯ ದೂರವಾಣಿ ಸಂಖ್ಯೆ-0836-2443743, 9591024499, 8618022108 ಸಂಪರ್ಕಿಸಿ ತಮ್ಮ ಹೆಸರನ್ನು ಬೆಳಿಗ್ಗೆ 10-15 ರಿಂದ ಸಾಯಂಕಾಲ 5-15 ರವರೆಗೆ ನೋಂದಾಯಿಸಿಕೊಳ್ಳಬಹುದೆಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
22/12/2021 09:40 pm