ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್
ಹುಬ್ಬಳ್ಳಿ: ರೈತರ ಸಮಸ್ಯೆ ಕುರಿತು ನಿಮ್ಮ ಪಬ್ಲಿಕ್ ನೆಕ್ಸ್ಟ್ ಬಿತ್ತರಿಸಿದ ವರದಿಗೆ ರಾಜ್ಯ ಸರ್ಕಾರ ಹಾಗೂ ಸಚಿವರು ಸ್ಪಂದನೆ ನೀಡಿದ್ದು, ಬೆಂಬಲ ಬೆಲೆ ಯೋಜನೆ ಘೋಷಣೆ ಮಾಡಿದ್ದು, ಕಡಲೆ ಖರೀದಿ ಕೇಂದ್ರ ಸ್ಥಾಪನೆಗೆ ಆದೇಶಿಸಿದ್ದಾರೆ. ಇದು ನಿಮ್ಮ ಪಬ್ಲಿಕ್ ನೆಕ್ಸ್ಟ್ ಬಿಗ್ ಇಂಪ್ಯಾಕ್ಟ್ ಆಗಿದೆ.
ಹೌದು. 2021-22ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳನ್ನು ಪ್ರತಿ ಕ್ವಿಂಟಾಲ್‌ಗೆ ಕೇಂದ್ರ ಸರ್ಕಾರವು ನಿಗದಿಪಡಿಸಿರುವ ರೂ.5230 ನಂತೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಧಾರವಾಡ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ಬಾಗಲಕೋಟೆ, ದಾವಣಗೆರೆ, ಚಿಕ್ಕಮಗಳೂರು ಮತ್ತು ರಾಯಚೂರು ಜಿಲ್ಲೆಗಳ ರೈತರಿಂದ ಖರೀದಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಸಚಿವರು, ಸರ್ಕಾರದ ಆದೇಶದಂತೆ ನವಲಗುಂದ ವಿಧಾನಸಭಾ ಕ್ಷೇತ್ರ ಸೇರಿದಂತೆ ಧಾರವಾಡ ಜಿಲ್ಲೆಯಾದ್ಯಂತ ಕಳೆದ ಬಾರಿಯಂತೆ ಈ ಸಾಲಿನಲ್ಲಿಯೂ ಕಡಲೆ ಖರೀದಿ ಕೇಂದ್ರಗಳನ್ನು ತೆರೆಯಲು ಸೂಚಿಸಲಾಗಿದೆ. ನಾಫೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕ್‌ಫೆಡ್) ಮತ್ತು ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಯಮಿತ ಸಂಸ್ಥೆಗಳನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಗಳನ್ನಾಗಿ ನೇಮಿಸಿದೆ ಎಂದು ತಿಳಿಸಿದ್ದಾರೆ.
Kshetra Samachara
15/02/2022 02:22 pm