ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಹಲವು ಬೇಡಿಕೆಗಳ ಈಡೇರಿಕೆಗಾಗಿ ರೈತರಿಂದ ಮನವಿ

ನವಲಗುಂದ : ಮಹದಾಯಿ ಕಳಸಾ-ಬಂಡೂರಿ ಯೋಜನೆಯ ಕಾಮಗಾರಿಯನ್ನು ತಕ್ಷಣವೇ ಆರಂಭಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಾಗುವುದು ಎಂದು ಮಲಪ್ರಭಾ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ, ಪಕ್ಷಾತೀತ ಹೋರಾಟ ಸಮಿತಿ ವತಿಯಿಂದ ತಹಶೀಲ್ದಾರ್ ಮೂಲಕ ಮನವಿಯನ್ನು ಸಲ್ಲಿಸಲಾಯಿತು.

ಇದರೊಂದಿಗೆ ಕಳೆದ ನಾಲ್ಕೈದು ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯಾಗಿದೆ ಕೂಡಲೇ ಸರ್ಕಾರ ಪರಿಹಾರ ನೀಡಬೇಕು. ಇನ್ನು ಅನೇಕ ರೈತರಿಗೆ ಬೆಳೆ ವಿಮೆ ಫಸಲ್ ಭೀಮಾ ಯೋಜನೆಯ ಹಣ ಮುಟ್ಟಿಲ್ಲ ಕೂಡಲೇ ಸರಕಾರ ಮುಟ್ಟಿಸಬೇಕು. ಕಡಲೆ ಖರೀದಿ ಮಾಡಿದ ಹಣ ಸಂಪೂರ್ಣವಾಗಿ ರೈತರಿಗೆ ಮುಟ್ಟಿಲ್ಲ, ಕೂಡಲೇ ಮುಟ್ಟಿಸಬೇಕು.

ರೈತರು ಹೊಲಗಳಿಗೆ ತೆರಳಲು ರಸ್ತೆ ಇಲ್ಲದೆ ಪರದಾಟ ನಡೆಸಿದ್ದಾರೆ. ಸೂಕ್ತ ರಸ್ತೆ ನಿರ್ಮಾಣ ಮಾಡಬೇಕು. ರೈತರಿಗೆ ರಸಗೊಬ್ಬರಗಳನ್ನು ಗೊಬ್ಬರದ ಅಂಗಡಿಗಳ ಮೂಲಕ ಹಾಗೂ ಸಹಕಾರಿ ಸಂಘಗಳ ಮೂಲಕ ತಕ್ಷಣವೇ ದಾಸ್ತಾನು ಮಾಡಬೇಕು. ನವಲಗುಂದ ಪಟ್ಟಣದಲ್ಲಿ ರೈತ ಸಂಪರ್ಕ ಕೇಂದ್ರ ತೆರೆಯಬೇಕು ಎಂಬ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ರೈತ ಮುಖಂಡರಾದ ಸುಭಾಷಗೌಡ ಪಾಟೀಲ ಅವರು ಆಗ್ರಹಿಸಿದರು.

Edited By : PublicNext Desk
Kshetra Samachara

Kshetra Samachara

24/05/2022 03:55 pm

Cinque Terre

15.47 K

Cinque Terre

0

ಸಂಬಂಧಿತ ಸುದ್ದಿ