ನವಲಗುಂದ : ನವಲಗುಂದ ತಾಲೂಕಿನಲ್ಲಿ ಪ್ರಮಾಣಕ್ಕಿಂತ ಹೆಚ್ಚಿನ ಮಳೆ ಸುರಿದಿದ್ದು, ಹಲವೆಡೆ ರೈತರು ಬೆಳೆ ಹಾನಿ ಸಂಕಷ್ಟಕ್ಕೆ ಸಿಲುಕ್ಕಿದ್ದಾರೆ. ಈ ಹಿನ್ನೆಲೆ ಮಂಗಳವಾರ ಪಟ್ಟಣದ ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ ಅತಿವೃಷ್ಟಿಯಿಂದಾದ ನೆರೆ ಹಾನಿಯ ಸಮೀಕ್ಷೆಯ ಪೂರ್ವಭಾವಿ ಸಭೆ ನಡೆಸಲಾಯಿತು.
ಇನ್ನು ನೆರೆ ಹಾನಿಯ ಸಮೀಕ್ಷೆಯ ಪೂರ್ವಭಾವಿ ಸಭೆಯನ್ನು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ತಹಶಿಲ್ದಾರರಾದ ಅನೀಲ ಬಡಿಗೇರ, ತಾಲೂಕು ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಮಾಹಿತಿಗಳನ್ನು ಹಂಚಿಕೊಂಡರು.
Kshetra Samachara
19/07/2022 05:54 pm