ಧಾರವಾಡ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧಾರವಾಡ ಜಿಲ್ಲೆಯ ಭಾಗಶಃ ಬೆಳೆ ನಾಶವಾಗಿದೆ. ಇನ್ನೂ ಎರಡ್ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೈತ ಮಾತ್ರ ಬೆಳೆದ ಬೆಳೆ ಕೈಗೆ ಬರದೇ ಕಂಗಾಲಾಗುವಂತಾಗಿದೆ.
ಧಾರವಾಡ ತಾಲೂಕಿನ ನಿಗದಿ ಗ್ರಾಮದ ಮಹೇಶ ಎಂಬ ರೈತ ತಮ್ಮ ಆರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಣಸಿನಕಾಯಿ ಬೆಳೆ ಮಳೆಯಿಂದಾಗಿ ಸಂಪೂರ್ಣ ನಾಶವಾಗಿದ್ದು, ಇದರಿಂದ ರೈತ ಮಹೇಶ ಅವರು ಕಣ್ಣೀರಿಡುವಂತಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ಪರಿಹಾರಕ್ಕಾಗಿ ಅಧಿಕಾರಿಗಳ ಮುಂದೆ ಅಂಗಲಾಚುವಂತಾಗಿದೆ.
Kshetra Samachara
10/09/2022 11:57 am