ಧಾರವಾಡ: ಅಲ್ಲಿ ಬಗೆ ಬಗೆಯ ಖಾದ್ಯಗಳ ಸಮ್ಮಿಲನ, ಜೊತೆಗೆ ಮಹಿಳಾ ಮಣಿಗಳೇ ಹೆಚ್ಚಾಗಿದ್ದ ಮಾರುಕಟ್ಟೆ ಅದಾಗಿತ್ತು. ತಿಂಡಿ, ತಿನಿಸು, ಸೀರೆ ಸೇರಿದಂತೆ ಇತ್ಯಾದಿ ವಸ್ತುಗಳ ಮಾರಾಟ ಅಲ್ಲಿ ಜೋರಾಗಿ ನಡೆದಿತ್ತು. ಈ ದೃಶ್ಯ ಕಂಡು ಬಂದದ್ದು ಧಾರವಾಡದಲ್ಲಿ.
ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಧಾರವಾಡದ ಕಡಪಾ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಮಹಿಳೆಯರಿಗಾಗಿಯೇ ಹಾಗೂ ಸ್ವಸಹಾಯ ಸಂಘಗಳು ಸಿದ್ಧಪಡಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಜಿಲ್ಲೆಯ ಬೇರೆ ಬೇರೆ ಭಾಗಗಳಿಂದ ಬಂದ ಮಹಿಳೆಯರು ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು, ತಾವು ಸಿದ್ಧಪಡಿಸಿ ಉತ್ಪನ್ನಗಳನ್ನು ಅಲ್ಲಿ ಮಾರಾಟ ಮಾಡಿ, ತಮಗೆ ಈ ಮಾರುಕಟ್ಟೆ ಒದಗಿಸಿಕೊಟ್ಟಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.
ಈ ಮೇಳಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ, ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ ಚಾಲನೆ ನೀಡಿದರು.
Kshetra Samachara
08/03/2022 08:58 pm