ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಮಂಡಿಸಿದ ಬಜೆಟ್ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಕೊಡುಗೆಯನ್ನು ನೀಡಿದೆ. ಆದರೆ ಉತ್ತರ ಕರ್ನಾಟಕ ಭಾಗಕ್ಕೆ ಮಾತ್ರ ಹೆಚ್ಚಿನ ಒತ್ತನ್ನು ನೀಡದೇ ಇರುವುದು ನಿರಾಶೆ ಭಾವ ಮೂಡಿಸಿದೆ ಎಂದು ವಾಣಿಜ್ಯೋದ್ಯಮ ಸಂಸ್ಥೆಯ ಕೃಷಿ ಉಪಸಮಿತಿಯ ಚೇರ್ಮನ್ ಸಿ.ಎನ್.ಕರಿಕಟ್ಟಿ ಹೇಳಿದ್ದಾರೆ.
ಕರ್ನಾಟಕ ಚೇಂಬರ್ ಆಫ್ ಕಾಮರ್ಸ್‌ನಲ್ಲಿ ಬಜೆಟ್ ವೀಕ್ಷಣೆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೃಷಿಯ ವಿವಿಧ ರಂಗಕ್ಕೆ ಪೂರಕವಾದ ಹಾಗೂ ಅಭಿವೃದ್ಧಿ ದೂರದೃಷ್ಟಿಯಿಂದ ಈ ಬಜೆಟ್ ಮಂಡನೆ ಮಾಡಲಾಗಿದೆ. ಅಲ್ಲದೇ ಕೃಷಿಯಲ್ಲಿ ತೋಟಗಾರಿಕೆ ಉತ್ತೇಜನಕ್ಕೆ ಆದ್ಯತೆ ನೀಡಿರುವುದು ಸ್ವಾಗತಾರ್ಹವಾಗಿದೆ ಎಂದು ಅವರು ಹೇಳಿದರು.
ಬೆಂಗಳೂರು ಭಾಗದಲ್ಲಿ ಸಿಎಂ ಬೊಮ್ಮಾಯಿ ಅವರು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಆದರೆ ಏಕೋ ಏನೋ ಹುಬ್ಬಳ್ಳಿ ಧಾರವಾಡ ಅವಳಿನಗರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿಲ್ಲ. ಸಾಕಷ್ಟು ಭರವಸೆಯನ್ನು ಇಲ್ಲಿನ ಜನರು ಇಟ್ಟುಕೊಂಡಿದ್ದರು. ಆದರೆ ನಿರೀಕ್ಷೆ ಮಟ್ಟದಲ್ಲಿ ಬಜೆಟ್ ತೃಪ್ತಿಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
Kshetra Samachara
04/03/2022 06:01 pm