ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್‌ನಲ್ಲಿ ಉತ್ತಮವಾದ ಕೊಡುಗೆ ಕೊಟ್ಟಿದ್ದಾರೆ. ಅವರು ಇಂದು ಮಂಡಿಸಿದ ಬಜೆಟ್ ಸ್ವಾಗತಾರ್ಹವಾಗಿದೆ ಎಂದು ಉದ್ಯಮಿ ಮಹೇಂದ್ರ ಸಿಂಘಿ ಹೇಳಿದ್ದಾರೆ.
ಬಜೆಟ್ ಬಳಿಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರೈಲ್ವೆ ಸಚಿವರಾಗಿದ್ದ ದಿ.ಸುರೇಶ ಅಂಗಡಿಯವರ ಕನಸನ್ನು ಸಾಕಾರಗೊಳಿಸುವಲ್ಲಿ ರೈಲ್ವೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ. ಅಳ್ನಾವರ, ಗದಗ, ಲಕ್ಷ್ಮೇಶ್ವರ ಹಾಗೂ ಯಲವಗಿ ಭಾಗದ ರೈಲ್ವೆ ಯೋಜನೆಗೆ 927 ಕೋಟಿ ರೂ. ಘೋಷಣೆ ಮಾಡಿರುವುದು ನಿಜಕ್ಕೂ ಸ್ವಾಗತಾರ್ಹವಾಗಿದೆ ಎಂದರು.
ಎಲ್ಲ ಪ್ರಾಂತ್ಯದಲ್ಲಿಯೂ ಕೂಡ ಬೇಡಿಕೆಗಳನ್ನು ಸಿಎಂ ಮುಂದೆ ಇಡಲಾಗಿತ್ತು. ಆದರೆ ಎಲ್ಲವನ್ನೂ ಸರಿದೂಗಿಸಿಕೊಂಡು ಉತ್ತಮ ರೀತಿಯಲ್ಲಿ ಸಿಎಂ ಬಜೆಟ್ ಘೋಷಣೆ ಮಾಡಿದ್ದಾರೆ ಎಂದು ಅವರು ಹೇಳಿದರು.
Kshetra Samachara
04/03/2022 06:11 pm