ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಧ್ವಜ ಸಂಹಿತೆ ತಿದ್ದುಪಡಿ ನಡುವೆಯೂ ದಾಖಲೆ ನಿರ್ಮಿಸಿದ ಖಾದಿ: ಹೆಚ್ಚಿದ ವಹಿವಾಟು

ಹುಬ್ಬಳ್ಳಿ: ಧ್ವಜ ಸಂಹಿತೆಗೆ ತಿದ್ದುಪಡಿ ತಂದು ಪಾಲಿಸ್ಟರ್ ಬಟ್ಟೆಯ ಧ್ವಜ ಮಾರಾಟಕ್ಕೆ ಅವಕಾಶ ಕಲ್ಪಿಸಿರುವುದಕ್ಕೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೂ ಈ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ದೇಶದಲ್ಲಿ ರಾಷ್ಟ್ರಧ್ವಜ ತಯಾರಿಸುವ ಏಕೈಕ ಸಂಸ್ಥೆಯಾದ ಖಾದಿ ಗ್ರಾಮೋದ್ಯೋಗ ಕೇಂದ್ರದ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ.

ಪ್ರಧಾನಿ ಮೋದಿ ಅವರು ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ವೇಳೆ 'ಹರ್ ಘರ್ ತಿರಂಗಾ' ಕಾರ್ಯಕ್ರಮ ಘೋಷಿಸಿದ ಹಿನ್ನೆಲೆಯಲ್ಲಿ ವಹಿವಾಟಿನಲ್ಲಿ ಏರಿಕೆ ದಾಖಲಾಗಿದೆ. ಒಂದು ವೇಳೆ ಈ ಅಭಿಯಾನಕ್ಕೆ ನಮ್ಮ ಕೇಂದ್ರದಿಂದಲೇ ರಾಷ್ಟ್ರಧ್ವಜ ಖರೀದಿಯಾಗುತ್ತಿದ್ದರೆ ಸಂಸ್ಥೆಗೆ ಮತ್ತಷ್ಟು ದೊಡ್ಡಮಟ್ಟದ ಆದಾಯ ಬರುತ್ತಿತ್ತು ಎಂಬುವುದು ಅಧಿಕಾರಿಗಳ ಮಾತು. ಈಗಾಗಲೇ 215 ಕೋಟಿ ಧ್ವಜಗಳನ್ನು ಮಾರಾಟ ಮಾಡಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ ಕೇವಲ 182 ಲಕ್ಷ ವಹಿವಾಟು ನಡೆಸಿತ್ತು. ಇದರಿಂದಾಗಿ ಕಳೆದ ಹಣಕಾಸು ಮೊದಲ ತ್ರೈಮಾಸಿಕಕ್ಕಿಂತ ಈ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ 768 ಲಕ್ಷ ಹೆಚ್ಚಿಗೆ ವಹಿವಾಟು ನಡೆಸಿದಂತಾಗಿದೆ.

ಇನ್ನೂ ಗ್ರಾಮೋದ್ಯೋಗ ಕೇಂದ್ರವೇ ರಾಷ್ಟ್ರಧ್ವಜ ಸರಬರಾಜು ಮಾಡುತ್ತದೆ. ಹಳ್ಳಿ ಗ್ರಾ.ಪಂ ಕಚೇರಿಯಿಂದ ಹಿಡಿದು ವಿದೇಶಗಳಲ್ಲಿನ ಭಾರತೀಯ ರಾಯಭಾರಿ ಕಚೇರಿಗಳ ಮೇಲೂ ಹಾರಾಡುವ ರಾಷ್ಟ್ರಧ್ವಜ ಇದೇ ಕೇಂದ್ರದಲ್ಲಿ ತಯಾರಾಗುತ್ತದೆ. ಕಳೆದ ವರ್ಷ 2021-2022 ವರ್ಷದಲ್ಲಿ ಬರೋಬ್ಬರಿ 52.5 ಕೋಟಿ ಮೌಲ್ಯದ ರಾಷ್ಟ್ರಧ್ವಜ ಮಾರಾಟ ಮಾಡಿತ್ತು. ಆದರೆ ಈ ವರ್ಷ ಅಂದರೆ 2022-23ರ ಸಾಲಿನ ಏಪ್ರಿಲ್‌ನಿಂದ ಜುಲೈವರೆಗೆ ಬರೊಬ್ಬರಿ 1.5 ಕೋಟಿ ರೂಪಾಯಿ ವಹಿವಾಟು ನಡೆಸಿದೆ. ಕೇಂದ್ರ ಸರ್ಕಾರ ಈ ವರ್ಷ ಆ.13ರಿಂದ 15ರವರೆಗೆ ಹರ್ ಘರ್ ತಿರಂಗಾ ಅಭಿಯಾನ ನಡೆಸಲು ಕರೆಕೊಟ್ಟಿದೆ. ಇದರಿಂದ ಸರ್ಕಾರಿ ಕಚೇರಿ, ಸಂಘ-ಸಂಸ್ಥೆಗಳು ಹೆಚ್ಚಿಗೆ ಧ್ವಜ ಖರೀದಿಸುತ್ತಿವೆ. ಇದರ ನಡುವೆಯೇ ಕೇಂದ್ರ ಸರ್ಕಾರ ಧ್ವಜ ಸಂಹಿತೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಲಕ್ಷಾಂತರ ಮೌಲ್ಯದ ಧ್ವಜ ಖರೀದಿಸಿದೆ. ಇದನ್ನು ನೋಡಿ ಇದೀಗ ಬೇರೆ ಬೇರೆ ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳೂ ಗ್ರಾಮೋದ್ಯೋಗ ಕೇಂದ್ರದಿಂದಲೇ ಖರೀದಿಸಲು ಮುಂದಾಗುತ್ತಿವೆ. ಇದರಿಂದಾಗಿ ವಹಿವಾಟು ಜಾಸ್ತಿಯಾಗಿದೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರದ ಖಾದಿ ವಿರೋಧಿ ನೀತಿಯ ನಡುವೆಯೂ ಬೆಂಗೇರಿ ಖಾದಿ ಗ್ರಾಮೋದ್ಯೋಗ ದಾಖಲೆಯನ್ನು ನಿರ್ಮಾಣ ಮಾಡಿರುವುದು ವಿಶೇಷವಾಗಿದೆ. ಸರ್ಕಾರ ದೇಶಿಯತೆಗೆ ಒತ್ತು ನೀಡುವ ಮೂಲಕ ಮತ್ತಷ್ಟು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಕಾರ್ಯ ಮಾಡಬೇಕಿದೆ.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

08/08/2022 05:00 pm

Cinque Terre

92.13 K

Cinque Terre

16

ಸಂಬಂಧಿತ ಸುದ್ದಿ