ಪಬ್ಲಿಕ್ ನೆಕ್ಸ್ಟ್ ವಿಶೇಷ: ಈರಣ್ಣ ವಾಲಿಕಾರ
ಹುಬ್ಬಳ್ಳಿ- ಇವರೆಲ್ಲ ಕೋಟ್ಯಾಂತರ ರೂಪಾಯಿ ಬಂಡವಾಳ ಹಾಕಿ ಉದ್ಯಮ ಮಾಡುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಲಾಕ್ ಡೌನ್ ದಿಂದಾಗಿ ಎಲ್ಲ ಉದ್ಯಮಗಳು ನೆಲಕಚ್ಚಿವೆ. ಮತ್ತೆ ರಾಜ್ಯ ಸರ್ಕಾರ ರಾಜ್ಯಾದ್ಯಂತ ಡಿಸೆಂಬರ್ 28 ರಿಂದ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದರಿಂದ ಉದ್ಯಮಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಹೌದು,,,, ಒಮ್ರಿಕಾನ್ ನಿಯಂತ್ರಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಹೊರಡಿಸಿದೆ. ಕೋವಿಡ್ ಎರಡು ಬಾರಿಯ ಲಾಕ್‌ಡೌನ್ ಹಾಗೂ ನೈಟ್ ಕರ್ಫ್ಯೂ ಸೇರಿದಂತೆ ಮತ್ತಿತರ ನಿರ್ಬಂಧಗಳು ಉದ್ಯಮ ಕ್ಷೇತ್ರಕ್ಕೆ ಭಾರಿ ಹೊಡೆತ ನೀಡಿದೆ. ಅದರಲ್ಲೂ ಹೋಟೆಲ್ ಉದ್ಯಮ, ಆಟೋ, ಪ್ರವಾಸಿ ವಾಹನ ಚಾಲಕರು, ಬೀದಿ ಬದಿ ವ್ಯಾಪಾರಸ್ಥರು ತಲುಗಿದ್ದಾರೆ. ಸರ್ಕಾರದ ಪರಿಹಾರವೂ ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತ್ತಾಗಿದೆ. ನೈಟ್ ಕರ್ಫ್ಯೂ ಜಾರಿಗೊಳಿಸುವುದರಿಂದ ವೈಜ್ಞಾನಿಕವಾಗಿ ಕೋವಿಡ್ ತಡೆಯಲು ಸಾಧ್ಯವಿಲ್ಲ ಎಂದು ಸರ್ಕಾರದ ವಿರುದ್ಧ ಉದ್ಯಮಿಗಳು ಗರಂ ಆಗಿದ್ದಾರೆ.
ನೈಟ್ ಕರ್ಫ್ಯೂ ಮೂಲಕ ರಾತ್ರಿಯಲ್ಲಿ ಜನರ ಓಡಾಟಕ್ಕೆ ನಿಯಂತ್ರಣ ಹೇರಿದರೆ. ಹಗಲು ಹೊತ್ತಿನಲ್ಲಿ ಜನಸಂದಣಿ ಹೆಚ್ಚಾಗುತ್ತದೆ. ಜಾರಿಯಾದ ನೈಟ್ ಕರ್ಫ್ಯೂ ಅನ್ನು ರದ್ದು ಮಾಡಿ, ಜೀವನ ನಡೆಸಲು ಅನುಕೂಲ ಮಾಡಿಕೊಡಬೇಕೆಂದು ಉದ್ಯಮಿಗಳ ಅಳಲಾಗಿದೆ.
Kshetra Samachara
27/12/2021 06:36 pm