ಹುಬ್ಬಳ್ಳಿ: ಬೆಂಗಳೂರಿನ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ನಿಂದ ಪ್ರಸಕ್ತ ಸಾಲಿನ ವಿಶ್ವೇಶ್ವರಯ್ಯ ರಾಷ್ಟ್ರೀಯ ಸದ್ಭಾವನಾ ರಾಷ್ಟ್ರ ಪ್ರಶಸ್ತಿಗೆ ಹುಬ್ಬಳ್ಳಿಯ ಉದ್ಯಮಿ-ಸಮಾಜ ಸೇವಕ ರಮೇಶ ಡಿ. ಮಹಾದೇವಪ್ಪ ಆಯ್ಕೆಯಾಗಿದ್ದಾರೆ.
ಎಪ್ರಿಲ್ 28ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜರುಗುವ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನದ ತ್ರಿ-ದಶಮಾನೋತ್ಸವ ಸಮಾರಂಭದಲ್ಲಿ ರಮೇಶ ಡಿ. ಮಹಾದೇವಪ್ಪ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ರಮೇಶ ಸುರ್ವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
27/04/2022 11:33 am