ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಗಣೇಶೋತ್ಸವ ಸಂಭ್ರಮ; ವಸ್ತುಗಳ ಖರೀದಿಗೆ ಮುಗಿಬಿದ್ದ ಜನರು

ಹುಬ್ಬಳ್ಳಿ: ಎಲ್ಲೆಡೆ ಗಣೇಶ ಚತುರ್ಥಿಯ ಸಂಭ್ರಮ ಮನೆ ಮಾಡಿದೆ. ಅದರಲ್ಲೂ ಹುಬ್ಬಳ್ಳಿಯಲ್ಲಿ ಹಬ್ಬದ ಖರೀದಿ ಜೋರಾಗಿ ನಡೆದಿದೆ. ನಗರದ ಮಾರುಕಟ್ಟೆಗಳಲ್ಲಿ ಕಳೆದ ಎರಡು ದಿನಗಳಿಂದ ಗೌರಿ ಗಣೇಶ ಹಬ್ಬದ ಖರೀದಿ ಜೋರಾಗಿದೆ.

ಈ ಬಾರಿ ನಿರಂತರ ಮಳೆಯಿಂದಾಗಿ ಗ್ರಾಹಕರಿಗೆ ಹೂ, ಹಣ್ಣಿನ ಬೆಲೆ ಏರಿಕೆ ಬಿಸಿ ತುಸು ಕಡಿಮೆಯಾಗಿತ್ತು. ಇಂದು ಮತ್ತು ನಾಳೆ ಗೌರಿ ಹಾಗೂ ಗಣೇಶ ಹಬ್ಬದ ಕಾರಣ ಭಾನುವಾರದಿಂದಲೇ ನಗರದ ಜನತಾ ಬಜಾರ, ಗಾಂಧಿ ಮಾರುಕಟ್ಟೆ, ಹಳೇಹುಬ್ಬಳ್ಳಿ ಮಾರುಕಟ್ಟೆ, ಎಪಿಎಂಸಿ ಸೇರಿದಂತೆ ಪ್ರಮುಖ ರಸ್ತೆಯ ಬೀದಿಗಳ ಮಾರುಕಟ್ಟೆಯಲ್ಲಿ ಹೂ, ಹಣ್ಣು, ತರಕಾರಿ ಹಾಗೂ ಅಗತ್ಯ ಪೂಜಾ ಸಾಮಗ್ರಿಗಳ ಖರೀದಿ ಭರ್ಜರಿಯಾಗಿ ನಡೆದಿದೆ.

ನಗರದ ಪ್ರಮುಖ ಮಾರುಕಟ್ಟೆ ಜನತಾ ಬಜಾರ್‌ನಲ್ಲಿ ವ್ಯಾಪಾರ ವಹಿವಾಟು ಜೋರಾಗಿ ನಡೆಯುತ್ತಿದ್ದು, ಹೂ ಹಣ್ಣು ಪೂಜಾ ಸಾಮಾಗ್ರಿ ಖರೀದಿಸಲು ಸಾಕಷ್ಟು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಇದರ ಪರಿಣಾಮ ಮಾರುಕಟ್ಟೆ ಸುತ್ತ ಮುತ್ತ ಭಾರಿ ಟ್ರಾಫಿಕ್ ಜಾಮ್ ಆಗಿದೆ. ವಾಹನಗಳು ಸಾಲು ಗಟ್ಟಿ ನಿಂತಿವೆ. ಟ್ರಾಫಿಕ್ ನಿಯಂತ್ರಿಸಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ. ವಿವಿಧ ಬಗೆಯ ಹೂವು, ಹಣ್ಣು, ಬಾಳೆಕಂದು, ಮಾವಿನ ಎಲೆ, ತುಳಸಿಗರಿಕೆ ಇವುಗಳನ್ನು ಜನ ಹೆಚ್ಚಾಗಿ ಖರೀದಿ ಮಾಡುತ್ತಿದ್ದಾರೆ.

Edited By : Manjunath H D
Kshetra Samachara

Kshetra Samachara

30/08/2022 05:37 pm

Cinque Terre

25.11 K

Cinque Terre

0

ಸಂಬಂಧಿತ ಸುದ್ದಿ