ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 28 ವಿದ್ಯಾರ್ಥಿಗಳಿಗೆ ಸೋಂಕು: ಕುಸುಗಲ್ ಹೈಸ್ಕೂಲ್ ಸೀಲ್‍ಡೌನ್

ಹುಬ್ಬಳ್ಳಿ: ಕೊರೊನಾ ಮಹಾಮಾರಿ ಸೋಂಕು ಗ್ರಾಮೀಣ ಪ್ರದೇಶಗಳಿಗೆ ಲಗ್ಗೆ ಇಟ್ಟಿದ್ದು, ತಾಲೂಕಿನ ಕುಸುಗಲ್ ಗ್ರಾಮದ ಹೈಸ್ಕೂಲ್‍ನಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೀಲ್‍ಡೌನ್ ಮಾಡಲಾಯಿತು.

ಹೈಸ್ಕೂಲ್‍ನ 28 ವಿದ್ಯಾರ್ಥಿಗಳಿಗೆ, ಓರ್ವ ಶಿಕ್ಷಕರಿಗೆ ಹಾಗೂ ಓರ್ವ ಸಿಬ್ಬಂದಿಗೆ ಸೋಂಕು ಒಕ್ಕರಿಸಿದ್ದಾಗಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಹೈಸ್ಕೂಲನ್ನು ಮುಂದಿನ ಆದೇಶ ಬರುವವರೆಗೂ ಸೀಲ್‍ಡೌನ್ ಮಾಡಲಾಗಿದೆ. ಸ್ಥಳಕ್ಕೆ ಆರೋಗ್ಯಾಧಿಕಾರಿಗಳು, ಗ್ರಾಮಪಂಚಾಯತಿ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

Edited By : Nagaraj Tulugeri
Kshetra Samachara

Kshetra Samachara

19/01/2022 02:30 pm

Cinque Terre

29.26 K

Cinque Terre

0