ನವಲಗುಂದ: ನಾಡಿನಾದ್ಯಂತ ಅಪ್ಪು ಅಭಿಮಾನಿಗಳು ಅವರ ನಿಧನದಿಂದ ಶೋಕಾಚರಣೆಯಲ್ಲಿ ಮುಳುಗಿದ್ದು, ಪಟ್ಟಣದ ಗಾಂಧಿ ಮಾರುಕಟ್ಟೆಯಲ್ಲಿ ಡಾ. ಎ ಪಿ ಜೆ ಅಬ್ದುಲ್ ಕಲಾಂ ಸಂಘದ ವತಿಯಿಂದ ಅಪ್ಪು ಅವರಿಗೆ ಗೌರವ ನಮನ ಸಲ್ಲಿಸಲಾಯಿತು.
ಹೌದು. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಈಗಾಗಲೇ ಅಪಾರ ಅಭಿಮಾನಿಗಳನ್ನು ತೊರೆದು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಇದರಿಂದ ಆಘಾತಕ್ಕೋಳಗಾದ ಅಭಿಮಾನಿಗಳು ನಾಡಿನಾದ್ಯಂತ ನಮನ ಸಲ್ಲಿಸುತ್ತಿದ್ದು, ಪಟ್ಟಣದಲ್ಲಿ ಡಾ. ಎ ಪಿ ಜೆ ಅಬ್ದುಲ್ ಕಲಾಂ ಸಂಘದ ವತಿಯಿಂದ ಸಹ ಶ್ರದ್ಧಾಂಜಲಿ ಸಲ್ಲಿಸಲಾಯಿತು.
Kshetra Samachara
30/10/2021 09:23 am