ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಪುನೀತ್ ರಾಜಕುಮಾರ ಭಾವಪೂರ್ಣ ಶ್ರದ್ಧಾಂಜಲಿ...!

ಹುಬ್ಬಳ್ಳಿ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನದ ಹಿನ್ನಲೆಯಲ್ಲಿಂದು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು ಚೆನ್ನಮ್ಮ ವೃತ್ತದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.

ವಾಣಿಜ್ಯನಗರಿ ಹುಬ್ಬಳ್ಳಿಯೊಂದಿಗೆ ಸಾಕಷ್ಟು ಅವಿನಾಭಾವ ಸಂಬಂಧ ಹೊಂದಿದ್ದ ಪುನೀತ್ ರಾಜ್‍ಕುಮಾರ್ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದರು. ಹೃದಯಾಘಾತದ ಸುದ್ಧಿ ತಿಳಿಯುತ್ತಿದ್ದಂತೆ ಸಿದ್ಧಾರೂಢರಿಗೆ ವಿಶೇಷ ಪೂಜೆ ಸಲ್ಲಿಸಿದ್ದ ಅಭಿಮಾನಿಗಳು ಪುನೀತ್ ರಾಜ್‍ಕುಮಾರ್ ಸಾವನ್ನಪ್ಪಿದ ಸುದ್ಧಿ ತಿಳಿಯುತ್ತಿದ್ದಂತೆ ಶೋಕ ಸಾಗರದಲ್ಲಿ ಮುಳುಗಿದರು.

ಇನ್ನೂ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಚೆನ್ನಮ್ಮ ವೃತ್ತದಲ್ಲಿ ಪುನೀತ್ ರಾಜ್‍ಕುಮಾರ್ ಭಾವಚಿತ್ರಕ್ಕೆ ಪುಷ್ಪ ಸಮರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

Edited By : Manjunath H D
Kshetra Samachara

Kshetra Samachara

29/10/2021 04:27 pm

Cinque Terre

45.91 K

Cinque Terre

2

ಸಂಬಂಧಿತ ಸುದ್ದಿ