ಹುಬ್ಬಳ್ಳಿ: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನರಾದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಟೋ ಚಾಲಕರ ಹಾಗೂ ಮಾಲೀಕರ ಸಂಘದಿಂದ ವಿನೂತನ ರೀತಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಗೌರವ ನಮನ ಅರ್ಪಣೆ ಮಾಡಲಾಯಿತು.
ಆಟೋದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರ ಮೆರವಣಿಗೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಳಿಕ ಮೆರವಣಿಗೆ ಜೊತೆಗೆ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಚೆನ್ನಮ್ಮ ವೃತ್ತದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಆತ್ಮಕ್ಕೆ ಶಾಂತಿ ಕೋರಿದರು. ಇನ್ನೂ ಮೆರವಣಿಗೆ ಉದ್ದಕ್ಕೂ ಪವರ್ ಸ್ಟಾರ್ ಪರವಾಗಿ ಜಯ ಘೋಷ ಕೂಗುತ್ತಾ ನಟನ ಅಗಲಿಕೆಗೆ ಕಂಬನಿ ಮಿಡಿದರು.
Kshetra Samachara
30/10/2021 02:18 pm