ಬೆಂಗಳೂರು: 13ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯಲಹಂಕ ಸಮೀಪದ ಜಕ್ಕೂರಿನ GKVK ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಚಾಲನೆ ನೀಡಿದರು. ಬಾಬು ಜಗಜೀವನ್ ರಾಮ್ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಉದ್ಘಾಟನಾ ಸಮಾರಂಭದಲ್ಲಿ ತೋಟಗಾರಿಕೆ ಸಚಿವ ಮುನಿರತ್ನ, ಚಾಲೆಂಜಿಂಗ್ ಸ್ಟಾರ್ ದರ್ಶನ್, ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ದಿವಂಗತ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಪ್ರಿಯದರ್ಶನ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮ ಉದ್ಘಾಟನೆ ನಂತರ ಸಿಎಂ ಬಸವರಾಜ ಬೊಮ್ಮಾಯಿ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಅವರಿಗೆ ನಮಸ್ಕರಿಸಿದರು. ಸದ್ಯ ಚಲನಚಿತ್ರೋತ್ಸವದಲ್ಲಿ ಪುನೀತ್ ನಟನೆಯ ರಾಷ್ಟ್ರ ಪ್ರಶಸ್ತಿ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಹಾಗೆಯೇ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಉತ್ತಮ ಚಿತ್ರಗಳನ್ನು ಚಿತ್ರಪ್ರೇಮಿಗಳು ಚಿತ್ರೋತ್ಸವದಲ್ಲಿ ಪ್ರೇಕ್ಷಕರು ಕಣ್ತುಂಬಿಕೊಳ್ಳಬಹುದು..
Kshetra Samachara
04/03/2022 02:05 pm