ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಭರ್ಜರಿ ಓಪನಿಂಗ್ ಪಡೆದ 'ಜೇಮ್ಸ್'

ಧಾರವಾಡ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ 'ಜೇಮ್ಸ್' ಇಂದು ತೆರೆಗೆ ಅಪ್ಪಳಿಸಿದ್ದು, ಧಾರವಾಡದಲ್ಲಿ ಮೊದಲ ಶೋ ಭರ್ಜರಿ ಓಪನಿಂಗ್ ಪಡೆದಿದೆ.

ಧಾರವಾಡದ ಪದ್ಮಾ ಚಿತ್ರಮಂದಿರದಲ್ಲಿ ಜೇಮ್ಸ್ ಬಿಡುಗಡೆಯಾಗಿದ್ದು, ಚಿತ್ರಮಂದಿರದ ಆವರಣದಲ್ಲಿ ಅಪ್ಪು ಅಭಿಮಾನಿಗಳು ಜಮಾಯಿಸಿ ಸಂಭ್ರಮಿಸುತ್ತಿದ್ದಾರೆ.

ಚಿತ್ರಮಂದಿರದ ಆವರಣದಲ್ಲಿ ಹಾಕಲಾಗಿರುವ ಅಪ್ಪು ಕಟೌಟ್ಗೆ ಅಭಿಮಾನಿಗಳು ಕ್ಷೀರಾಭಿಷೇಕ ಮಾಡಿ, ಪಟಾಕಿ ಸಿಡಿಸಿ ಭರ್ಜರಿಯಾಗಿಯೇ 'ಜೇಮ್ಸ್' ನನ್ನು ಸ್ವಾಗತಿಸಿದ್ದಾರೆ.

ಕೊನೆಯ ಬಾರಿಗೆ ಬೆಳ್ಳಿ ತೆರೆಯ ಮೇಲೆ ಅಪ್ಪು ಅವರನ್ನು ಕಾಣಲು ಅವರ ಅಭಿಮಾನಿಗಳು ಮುಗಿಬಿದ್ದಿದ್ದು, ಟಿಕೆಟ್ ಕೂಡ ಸೋಲ್ಡ್ ಔಟ್ ಆಗಿವೆ.

Edited By : Shivu K
Kshetra Samachara

Kshetra Samachara

17/03/2022 10:52 am

Cinque Terre

32.39 K

Cinque Terre

1

ಸಂಬಂಧಿತ ಸುದ್ದಿ