ಹುಬ್ಬಳ್ಳಿ : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆ.ಜಿ.ಎಫ್-2 ದೇಶಾದ್ಯಂತ ಬಿಡುಗಡೆಯಾಗಿದೆ. ಹುಬ್ಬಳ್ಳಿಯಲ್ಲಿಯೂ ರಾಕಿ ಅಭಿಮಾನಿಗಳು ಕೆ.ಜಿ.ಎಫ್-2 ಚಿತ್ರವನ್ನು ಅದ್ದೂರಿಯಾಗಿ ಸ್ವಾಗತಿಸಿ ಸಂಭ್ರಮಿಸಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಕಟೌಟ್ ಗೆ ಕ್ಷೀರಾಭಿಷೇಕ ಮಾಡಿದ ಅಭಿಮಾನಿಗಳು, ಕುಂಬಳ ಕಾಯಿ, ತೆಂಗಿನ ಕಾಯಿ ಒಡೆದು ಪಟಾಕಿ ಸಿಡಿಸಿದ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು.
ಇನ್ನೂ ಹುಬ್ಬಳ್ಳಿಯ ಅಪ್ಸರಾ ಚಿತ್ರಮಂದಿರ ಸೇರಿದಂತೆ ಬಹುತೇಕ ಸಿನಿಮಾ ಮಂದಿರದ ಮುಂದೆ ಸಂಭ್ರಮಿಸಿದ ಅಭಿಮಾನಿಗಳು ಕೆಜಿಎಫ್-2 ಶತದಿನೋತ್ಸವ ಆಚರಿಸಲಿ ಎಂದು ಶುಭ ಹಾರೈಸಿದರು.
Kshetra Samachara
14/04/2022 12:55 pm