ಹುಬ್ಬಳ್ಳಿ: ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಎರಡನೇ ಪುತ್ರ ವಿಕ್ರಮ್ ರವಿಚಂದ್ರನ್ ಅಭಿನಯದ ಚೊಚ್ಚಲ ಚಿತ್ರ ತ್ರಿವಿಕ್ರಮ ಚಲನಚಿತ್ರವು ಇದೇ ಜೂನ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಸಹನಮೂರ್ತಿ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರಕ್ಕೆ ಅರ್ಜುನ ಜನ್ಯ ಅವರು ಸಂಗೀತ ಸಂಯೋಜನೆ ಮಾಡಿದ್ದು, ಚಿತ್ರದ ಹಾಡುಗಳು ಈಗಾಗಲೇ ಹಿಟ್ ಆಗಿವೆ. ಚಿತ್ರ 200 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಸಾಧುಕೋಕಿಲ, ಚಿಕ್ಕಣ್ಣ ಸೇರಿದಂತೆ ದೊಡ್ಡ ತಾರಾಗಣವಿದೆ ಎಂದರು.
ಚಿತ್ರದ ನಾಯಕ ವಿಕ್ರಮ್ ಮಾತನಾಡಿ, ಈ ಚಿತ್ರವು ಒಳ್ಳೆಯ ರೀತಿಯಾಗಿ ಮೂಡಿ ಬಂದಿದ್ದು, ಜನರ ಸಹಕಾರ ಅಗತ್ಯವಿದೆ. ನನ್ನ ತಂದೆ ಹೇಳಿದ ರೀತಿಯಾಗಿ ಜನರಿಗೆ ಇಷ್ಟವಾಗುವಂತಹ ಸಿನಿಮಾವನ್ನು ಮಾಡುತ್ತಿದ್ದೇನೆ. ಕನ್ನಡ ಚಿತ್ರಕ್ಕೆ ನಿಮ್ಮ ಬೆಂಬಲ ಸದಾ ಬೇಕು. ಒಂದು ಒಳ್ಳೆಯ ಸಿನಿಮಾ ಮಾಡಿ ಒಂದು ಒಳ್ಳೆಯ ಹೆಸರನ್ನು ನಾನು ತಗೊಳ್ತೀನಿ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚಿತ್ರದಲ್ಲಿ 6 ಹಾಡುಗಳು ಮೂಡಿ ಬಂದಿದ್ದು, ಉತ್ತಮವಾಗಿ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
14/06/2022 07:36 pm