ಹುಬ್ಬಳ್ಳಿ: ಡಾ.ರಾಜ್‌ಕುಮಾರ್ ಅವರ ಮೊಮ್ಮಗ ಧೀರನ್ ರಾಮ್‌ಕುಮಾರ್ ಅವರ ಮೊದಲ ಚಿತ್ರ ‘ಶಿವ 143’ ಪ್ರಚಾರಕ್ಕಾಗಿ ಚಿತ್ರತಂಡವು ಹುಬ್ಬಳ್ಳಿಗೆ ಭೇಟಿ ನೀಡಿದೆ. ಚಿತ್ರತಂಡದಿಂದ ಸಿದ್ಧಾರೂಢ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ನಂತರ ಮಾರ್ಕಂಡೇಶ್ವರ ದೇವಸ್ಥಾನದ ಮೂಲಕ ಮೂರು ಸಾವಿರ ಮಠಕ್ಕೆ ತಲುಪಿದ್ದು, ಇಲ್ಲಿಂದ ದಾಜೀಬಾನಪೇಟೆ, ಸಂಗೊಳ್ಳಿರಾಯಣ್ಣ ವೃತ್ತ, ಚನ್ನಮ್ಮ ವೃತ್ತದ ವರೆಗೆ ಅದ್ಧೂರಿ ಮೆರವಣಿಗೆ ನಡೆಯಿತು. ಪೂರ್ಣಕುಂಭಗಳು, ಡೊಳ್ಳುಕುಣಿತ, ಬೊಂಬೆ ಕುಣಿತ ಸೇರಿದಂತೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರದ ಮೆರವಣಿಗೆ ಮೆರುಗು ನೀಡಿದೆ. ರಾಜ ಕುಟುಂಬದ ಅಭಿಮಾನಿಗಳು ಅದ್ಧೂರಿಯಿಂದ ಸ್ವಾಗತಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
20/08/2022 08:36 pm